ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ @siddaramaiah ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?
‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ.
ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ.
– ಆರ್ ಅಶೋಕ್, ವಿಪಕ್ಷ ನಾಯಕ




