ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಮಳಿಗೆ ಸ್ಥಾಪನೆ ಮಾಡಲಾಗಿದೆ. ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಉತ್ಪನ್ನಗಳ ಮಾರಾಟ ಕೇಂದ್ರವಾದ “ಕಲಾಲೋಕ ಮಳಿಗೆ”ಯನ್ನು ಉದ್ಘಾಟಿಸಿ, ಮಾತನಾಡಿದರು.
ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಮಳಿಗೆ ಸ್ಥಾಪನೆ ಮಾಡಲಾಗಿದೆ. ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ ಎಂದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತಿದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟದ ಗುರಿಯನ್ನು ಹೊಂದಲಾಗಿದೆ ಎಂದರು.











