ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ತಕ್ಕ ಶಿಕ್ಷೆಗೆ ಬದ್ಧ: ಪ್ರಿಯಾಂಕ್ ಖರ್ಗೆ

3 years ago

#defamed #Basavanna #portrait #punished #PriyankKharge

ಬೆಂಗಳೂರು: ಚಿತ್ತಾಪುರದ ಹಲಕರ್ಟಿ ಗ್ರಾಮದಲ್ಲಿ ಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ನಡೆದಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿ ಕಲೆಹಾಕಲಾಗಿದ್ದು, ತನಿಖೆ ಪೂರ್ಣಗೊಳ್ಳುವ ಹಂತದಲ್ಲಿದೆ. ತಪ್ಪಿತಸ್ಥರು ಯಾರೇ ಇರಲಿ ಅವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆಗೆ ಗುರಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಆದರೆ ಇದೇ ವಿಚಾರವಾಗಿ ರಾಜಕೀಯ ದುರುದ್ದೇಶದ ಪ್ರತಿಭಟನೆಗೆ ಇಳಿದಿರುವ ಬಿಜೆಪಿ ನಾಯಕರು ಇದೇ ಆವೇಶವನ್ನ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಬಸವಣ್ಣನವರ ಪಠ್ಯವನ್ನು ಕೈಬಿಟ್ಟು ಅವಮಾನ ಮಾಡಿದಾಗ ತೋರಿದಿದ್ದರೆ ಇಂದು ಬೀದಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲವೇನೋ? ಎಂದು ಪ್ರಶ್ನಿಸಿದ್ದಾರೆ.

ಹುತ್ತವ ಬಡಿದರೆ ಉರಗ ಸಾವುದೇ?
ಘೋರತಪವ ಮಾಡಿದರೇನು
ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ
ಕೂಡಲಸಂಗಮದೇವ?

  • ಗುರು ಬಸವಣ್ಣ
    ಎಂಬ ಬಸವಣ್ಣನ ವಚನವನ್ನು ಉಲ್ಲೇಖಿಸಿದ್ದಾರೆ.

Leave a Reply