ದೆಹಲಿ: ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದೆ. ಈ ತೀರ್ಮಾನವನ್ನು ವಿರೋಧಿಸುವವರು ದೇಶದ ಅಭಿವೃದ್ಧಿ ವಿರೋಧಿಗಳು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ Narendra Modi ನೇತೃತ್ವದ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಗೆ ತರಲು ಸಂವಿಧಾನ ತಿದ್ದುಪಡಿಗೆ ಒಪ್ಪಿಗೆ ನೀಡಿದೆ. ಅದನ್ನು ಇದೇ ಸಂಸತ್ ಅಧಿವೇಶನದಲ್ಲಿ ಮಂಡಿಸುವ ವಿಚಾರ ಇದೆ. ಇದು ಬಹಳ ಪ್ರಮುಖವಾದದ್ದು, ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿ ಆಗಬೇಕಾದರೆ ಪ್ರತಿನಿತ್ಯ ಚುನಾವಣೆ ಮಾಡಲು ಆಗುವುದಿಲ್ಲ ಎಂದರು.
ಈ ದೇಶದಲ್ಲಿ ಸಹಕಾರಿ ವ್ಯವಸ್ಥೆಯಿಂದ ಹಿಡಿದು, ಪಂಚಾಯತಿ ಚುನಾವಣೆ, ವಿಧಾನಸಭೆ ಲೋಕಸಭೆವರೆಗೆ ಒಂದಿಲ್ಲ ಒಂದು ಚುನಾವಣೆ ನಡೆಯುತ್ತಲೇ ಇರುತ್ತವೆ. ಪ್ರತಿ ಚುನಾವಣೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣ ಖರ್ಚಾಗುತ್ತದೆ. ಅಷ್ಟೇ ಅಲ್ಲ ಆ ದಿನಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದರು.
ಒಂದು ದೇಶ ಒಂದು ಚುನಾವಣೆ ವ್ಯವಸ್ಥೆ ಜಾರಿಯಾದರೆ ಆಡಳಿತದಲ್ಲಿ ಸ್ಥಿರತೆ ಬರುತ್ತದೆ. ಅಭಿವೃದ್ಧಿ ಸ್ಥಿರತೆ ಬಹಳ ಮುಖ್ಯ. ಬೇರೆ ಯಾವ ದೇಶಗಳಲ್ಲಿಯೂ ಈ ರೀತಿಯ ವ್ಯವಸ್ಥೆ ಇಲ್ಲ. ಆದ್ದರಿಂದ ಇದಕ್ಕೆ ಇತಿಶ್ರೀ ಹಾಡಬೇಕೆಂದು ದಶಕಗಳಿಂದ ಚರ್ಚೆ ನಡೆಯುತ್ತಿತ್ತು. ನಮ್ಮ ಪ್ರಧಾನಮಂತ್ರಿಗಳು ಒಂದು ದಿಟ್ಟ ನಿರ್ಧಾರ ಮಾಡಿದ್ದು, ಇದು ದೂರಗಾಮಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದರು.
ಇದು ಈ ದೇಶಕ್ಕೆ ಒಳ್ಳೆಯದಾಗುವಂತಹ ನಿರ್ಧಾರ. ಇದಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿಯ ಶಿಫಾರಸ್ಸಿನ ಅನ್ವಯ ಈ ಬದಲಾವಣೆ ತರುತ್ತಿದ್ದಾರೆ. ಇದಕ್ಕೆ ಎಲ್ಲರೂ ಚರ್ಚೆ ಮಾಡಬೇಕು, ಸ್ವಾಗತ ಮಾಡಬೇಕು. ದೇಶದ ಎಲ್ಲ ಜನರೂ ಸ್ವಾಗತಿಸಬೇಕು ಎಂದರು.
ಇದನ್ನು ವಿರೋಧಿಸುವವರು ದೇಶದ ಅಭಿವೃದ್ಧಿಯ ವಿರೋಧಿಗಳಾಗಿದ್ದಾರೆ. ರಾಜಕೀಯ ಕಾರಣಗಳಿಗೆ ಇದನ್ನು ಕೆಲವರು ವಿರೋಧಿಸುತ್ತಿದ್ದಾರೆ. ಆದರೆ, ಇಡೀ ದೇಶ ಈ ಬದಲಾವಣೆಯ ಪರವಾಗಿ ನಿಲ್ಲಬೇಕು. ಈ ದಿಟ್ಟ ತೀರ್ಮಾನ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸುತ್ತೇನೆ ಎಂದರು.




