ಬೆಂಗಳೂರು: ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಕಿಡಿಕಾರಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂದಿರವೇ ಇರಲಿ ಒಕ್ಕಲಿಗರ ಮಠವೇ ಇರಲಿ ಅಥವಾ ಬೇರೆ ಯಾವುದೇ ಧಾರ್ಮಿಕ ಕೇಂದ್ರವಾಗಲೀ ಅವುಗಳ ಸಮಾಜಸೇವೆ ಮಾಡುವ ಕೇಂದ್ರಗಳು. ರಾಜಕಾರಣಕ್ಕಾಗಿ ಮಾತನಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಯಾರೂ ಕೂಡ ಯಾವುದೇ ಮಠದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದು, ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ. ಒಕ್ಕಲಿಗರ ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಆ ಮಠವನ್ನು ಯಾರೂ ಕೂಡ ಅನಗತ್ಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಹಿಂದಿನ ಸ್ವಾಮೀಜಿಗಳಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕೇವಲ ಒಕ್ಕಲಿಗರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಎಲ್ಲಾ ಸಮುದಾಯವನ್ನು ಮುನ್ನಡೆಸಿದ್ದರು. ಈಗಿನ ಶ್ರೀಗಳು ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ನನಗೆ ಕೊನೆ ಕ್ಷಣದಲ್ಲಿ ಬರುವಂತೆ ಸೂಚನೆ ಬಂದಿತ್ತು. ನಾನು ಅನಗತ್ಯವಾಗಿ ಮಾತನಾಡಬಾರದೆಂದು ಸುಮ್ಮನಿದ್ದೇನೆ. ಮಠಗಳು, ಮಠಾಧೀಶರ ಬಗ್ಗೆ ಸಮಾಜ ತನ್ನದೇ ಆದ ಗೌರವ ಇಟ್ಟುಕೊಂಡಿರುತ್ತದೆ. ಅದನ್ನು ಉಳಿಸುವುದು ಅಗತ್ಯ ಎಂದರು.



