ಬೆಂಗಳೂರು: ಕಪಲ್ಸ್ ಪಾರ್ಟಿಗೆಂದು ಬರುವ ಜೋಡಿಗಳು ಏಕಾಂತದಲ್ಲಿರುವ ಕ್ಷಣಗಳನ್ನು ಅವರ ಗಮನಕ್ಕೆ ಬಾರದಂತೆ ಚಿತ್ರೀಕರಿಸಿ ದುರ್ಬಳಕೆ ಮಾಡುತ್ತಿದ್ದ ಖದೀಮರು ಬೆಂಗಳೂರು ಪೊಲೀಸರ ಅತಿಥಿಯಾಗಿದ್ದಾರೆ.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಕಪಲ್ಸ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಖದೀಮರು ಅದರ ಹೆಸರಿನಲ್ಲಿ ಅಕ್ರಮ ಚಟುವಟಿಕೆಯನ್ನು ನಡೆಸುತ್ತಿದ್ದರು ಹಾಗೂ ಮಹಿಳೆಯರ ಅಶ್ಲೀಲ ಪೋಟೋ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನಿಟ್ಟುಕೊಂಡು ಬೆದರಿಸಿ ಸುಲಿಯುತ್ತಿದ್ದರು. ಇವರಿಂದ ವಂಚನೆಗೊಳಗಾದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಶ್ಲೀಲ ಪೋಟೋಗಳು ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ರಾಜರಾಜೇಶ್ವರಿ ನಗರದ ಬಿಇಎಂಎಲ್ ಲೇಔಟ್ ನ ಹೇಮಂತ್ ವೆಂಕಟೇಶ್(41) ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬದ ಹರೀಶ್ ಕೆ.ಬಿ(32) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ 7 ಮೊಬೈಲ್ ಗಳು ಹಾಗೂ ಒಂದು ಲ್ಯಾಪ್ಟಾಪ್ ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.




