ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸಗಳನ್ನು ಆರ್ ಡಿ ಎಕ್ಸ್ ಬಳಸಿ ಉಡಾಯಿಸುವುದಾಗಿ ಅನಾಮಧೇಯ ಬೆದರಿಕೆ ಕರೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಕ್ಟೋಬರ್ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀಮಂತ ಕುಮಾರ್ ಸಿಂಗ್ ತಿಳಿಸಿದ್ದಾರೆ.
ashwinshekher@outlook.com ನಿಂದ ಬಂದಿರುವ ಈಮೇಲ್‌ನಲ್ಲಿ, ಸಿಎಂ ಮತ್ತು ಡಿಸಿಎಂ ಇಬ್ಬರ ನಿವಾಸಗಳಲ್ಲಿ ನಾಲ್ಕು ಆರ್‌ಡಿಎಕ್ಸ್ ಹಾಗೂ ಸುಧಾರಿತ ಐಇಡಿಗಳನ್ನು ಇರಿಸಲಾಗಿದೆ. ಅವುಗಳನ್ನು ರಿಮೋಟ್ ಮೂಲಕ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು.
ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಾಂಬ್ ಪತ್ತೆ ದಳ ಎರಡೂ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಆದರೆ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 351(4) (ಕ್ರಿಮಿನಲ್ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ತಮಿಳುನಾಡಿನ ವ್ಯಕ್ತಿಯೊಬ್ಬರ ಇಮೇಲ್ ಐಡಿಯನ್ನು ಟ್ರ್ಯಾಕ್ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿಯ ಬೆದರಿಕೆಗಳು ಮತ್ತು ಮಾಹಿತಿಗಳು ಪದೇಪದೇ ಇಮೇಲ್ ಮೂಲಕ ಬರುತ್ತಿವೆ. ಬೆದರಿಕೆಯ ಇಮೇಲ್‌ಗಳ ಕಳುಹಿಸುವವರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ಸಹ ರಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.




