ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ

12 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವ ಕಿಡಿಗೇಡಿಯೊಬ್ಬ ಮೃತ ದೇಹವನ್ನು ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗಿನಲ್ಲಿ ತುಂಬುವುದಾಗಿ ಹೇಳಿದ್ದಾನೆ. ಈ ಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು, ಅದನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಿಂಧಾರ್‌ ರಜಪೂತ್‌ ಎಂಬ ಹೆಸರಿನಿಂದ ಈ ಇಮೇಲ್‌ ಸಂದೇಶ ಬಂದಿದ್ದು, ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗಿಗೆ ತುಂಬುವುದಾಗಿ ಬೆದರಿಕೆ ಹಾಕಲಾಗಿದೆ.

ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.

ರಾಮಪುರದ ಪ್ರಭಾಕರ್‌ಗೆ 11 ಕೋಟಿ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್‌ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಒಬ್ಬ ಮಗನನ್ನು ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ ನನ್ನು ಕೊಲೆ ಮಾಡುತ್ತೇನೆ ಎಂದು ಅದೇ ಇ-ಮೇಲ್‌ನಲ್ಲಿ ಬೆದರಿಕೆ ಹಾಕಲಾಗಿದೆ.

Leave a Reply