ಬೆಳಗಾವಿ ಜಿಪಂಗೆ ಮೂರು ಪ್ರಶಸ್ತಿ, ಗ್ರಾಪಂಗೆ ಎರಡು ಪ್ರಶಸ್ತಿ ಪ್ರದಾನ
ಬೆಳಗಾವಿ: 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಮೃತ ಸರೋವರ ಜಿಲ್ಲಾ ಪುರಸ್ಕಾರ ಸೇರಿದಂತೆ ಒಟ್ಟು ಐದು ಪ್ರಶಸ್ತಿಗಳನ್ನು ಬೆಳಗಾವಿ ಜಿಲ್ಲೆಗೆ ನೀಡಿ ಗೌರವಿಸಲಾಯಿತು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್. ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್ ಅಂಬೇಡ್ಕರ್ ಭವನದಲ್ಲಿ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು.
ಅದೇ ರೀತಿ ಬೆಳಗಾವಿ ಜಿಲ್ಲೆಯ ಕೃಷಿ ಮತ್ತು ಜಲಾನಯನ ಹಾಗೂ ಅರಣ್ಯ ಇಲಾಖೆಗೆ ಅತ್ಯುತ್ತಮ ಜಿಲ್ಲಾ ಒಗ್ಗೂಡಿಸುವಿಕೆ ಪುರಸ್ಕಾರವನ್ನು ಜಿಪಂ ಸಿಇಒ ರಾಹುಲ್ ಶಿಂಧೆ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಕೆ.ಎಸ್.ಗೊರವರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿ ಸ್ವೀಕರಿಸಿದರು.
ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯತಿಗೆ ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರವನ್ನು ತಾಪಂ ಇಒ ಟಿ.ಆರ್.ಮಲ್ನಾಡದ, ಸಹಾಯಕ ನಿರ್ದೇಶಕ (ಗ್ರಾಉ) ಲಕ್ಷ್ಮೀನಾರಾಯಣ, ಗ್ರಾಪಂ ಅಧ್ಯಕ್ಷ ಬಸವರಾಜ ಗೊಸುರಿ ಹಾಗೂ ಪಿಡಿಒ ನಿರಂಜನ ಕುರಬೆಟ್ಟ ಅವರು ಸ್ವೀಕರಿಸಿದರು. ಬಳಿಕ ಉತ್ತಮ ಕಾಯಕ ಬಂಧು ಪುರಸ್ಕಾರವನ್ನು ಕಾಯಕ ಬಂಧು ಅನಿತಾ ತುಕಾರಾಮ ಬೆಳಗಾಂವಕರ್, ತಾಪಂ ಇಒ ರಮೇಶ ಹೆಡಗೆ, ತಾಲೂಕು ಐಇಸಿ ಸಂಯೋಜಕ ರಮೇಶ ಮಾದರ ಸ್ವೀಕರಿಸಿದರು.
ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆ ಈ ಐದು ಪ್ರಶಸ್ತಿ ಪಡೆದು ಸಾಧನೆ ಮಾಡಿದೆ.
ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್, ಶರತ್ ಬಚ್ವೇಗೌಡ, ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನಕುಮಾರ ಮಾಲಪಾಟಿ ಮತ್ತಿತರರು ಹಾಜರಿದ್ದರು.



