ಕಲಬುರಗಿ: ಕಲಬುರಗಿ ವಿಭಾಗದ ಏಳು ಜಿಲ್ಲೆಗಳಲ್ಲಿ ಒಟ್ಟು 1.32 ಲಕ್ಷ ಬಗರ್ ಹುಕುಂ ಅರ್ಜಿಗಳು ಸಲ್ಲಿಕೆಯಾಗಿದ್ದು, ಮುಂದಿನ ಮೂರು ತಿಂಗಳೊಳಗಾಗಿ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ. ಅರ್ಹ ರೈತರಿಗೆ ಜಮೀನು ಮಂಜೂರು ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬಡವರಿಗೆ, ಭೂ ರಹಿತರಿಗೆ ಹಾಗೂ ಅರ್ಹ ರೈತರಿಗೆ ಭೂಮಂಜೂರು ಮಾಡುವುದು ಸರ್ಕಾರದ ಕರ್ತವ್ಯ ಎಂದರು.
ಆದರೆ, ವರ್ಷವಾದರೂ ಈ ಅರ್ಜಿಗಳ ವಿಲೇ ಆಗಿಲ್ಲ. ಹೀಗಾಗಿ ಮುಂದಿನ ಒಂದು ತಿಂಗಳಲ್ಲಿ ಅರ್ಹರಿಗೆ ಭೂ ಮಂಜೂರು ಮಾಡಬೇಕು. ಈಗ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳನ್ನು ಮಾತ್ರ ಶೀಘ್ರದಲ್ಲಿ ಶಾಸಕರ ನೇತೃತ್ವದ ಬಗರ್ ಹುಕುಂ ಸಭೆಯ ಮುಂದಿಡಿ ಎಂದು ಸೂಚಿಸಿದರು.
ಯಾರಿಗೆ ಜಮೀನು ನೀಡಬೇಕು? ಯಾರಿಗೂ ಜಮೀನು ನೀಡಬಾರದು? ಎಂಬ ವಿಚಾರವನ್ನು ಸಭೆ ನಿರ್ಧರಿಸಲಿ. ಒಟ್ಟಾರೆ ಮುಂದಿನ ಮೂರು ತಿಂಗಳಲ್ಲಿ ಈ ಎಲ್ಲಾ ಅರ್ಜಿಗಳನ್ನೂ ವಿಲೇವಾರಿ ಮಾಡಿ ಎಂದು ತಿಳಿಸಿದರು.




