ಬೆಂಗಳೂರು: ನಾಮಕರಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ಸಮೀಪ ನಡೆದಿದೆ.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಕಾರಿನಲ್ಲಿ ಹಿರಿಯೂರಿಗೆ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂದೇ ಕುಟುಂಬದ ಮೂವರು ಬಲಿಯಾಗಿದ್ದಾರೆ.
ಮೃತರನ್ನು ಬೆಂಗಳೂರಿನ ಮಲ್ಲೇಶ್ವರ ನಿವಾಸಿಗಳಾದ ಗೋಪಾಲ (60), ಇವರ ಪತ್ನಿ ಶಶಿಕಲಾ(54) ಮತ್ತು ಇವರ ಮಗಳು ದೀಪಾ(25) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಆಶ್ಚರ್ಯವೆಂಬಂತೆ ಒಂದೂವರೆ ವರ್ಷ ಹಾಗೂ ಐದು ವರ್ಷದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿವೆ.
ಗೋಪಾಲ ಅವರು ಪತ್ನಿ, ಮಗಳು ಹಾಗೂ ಇಬ್ಬರು ಮೊಮ್ಮಕ್ಕಳ ಜೊತೆ ಮಲ್ಲೇಶ್ವರಂನಿಂದ ಹಿರಿಯೂರಿಗೆ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿದ್ದರು. ಇವರ ಕಾರು 10.30ರ ಸುಮಾರಿಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಅಂಚೆ ಮನೆ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಎಡ ಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಶಿಕಲಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡಿದ್ದ ಗೋಪಾಲ ಹಾಗೂ ದೀಪಾ ಅವರನ್ನು ಸಾರ್ವಜನಿಕರ ನೆರವಿನೊಂದಿಗೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




