ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್(30), ಫಾರುಕ್(30) ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿಯ ಶ್ರೀನಿವಾಸ್(35) ಮೃತಪಟ್ಟವರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕಾಳಘಟ್ಟದ ಶ್ರೀನಿವಾಸ್ ಅವರ ತೋಟದಲ್ಲಿ ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ದುರಂತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



