ಬೆಂಗಳೂರು: ಭಾರತೀಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಂದ ಹಣಪಡೆದು ವಂಚಿಸುತ್ತಿದ್ದ ಗ್ಯಾಂಗ್ ಅನ್ನು ಪತ್ತೆ ಮಾಡಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಕಲಬುರಗಿಯ ಲಕ್ಷ್ಮಿಕಾಂತ್ (46), ಕುಲಪ್ ಸಿಂಗ್ (38) ಹಾಗೂ ಉತ್ತರಹಳ್ಳಿಯ ಮುರುಳಿ (42) ಬಂಧಿತ ಆರೋಪಿಗಳಾಗಿದ್ದು, ಗ್ಯಾಂಗ್ ನಲ್ಲಿದ್ದು ತಲೆಮರೆಸಿಕೊಂಡಿರುವ ನಾಲ್ಕು ಆರೋಪಿಗಳ ಬಂಧನಕ್ಕೆ ಶೋಧ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದರು.
ವಿಜಯಪುರ ಜಿಲ್ಲೆಯ ಆಲಮೇಲ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಹುದ್ದೆಗೆ ನೇಮಕಾತಿ ಮಾಡಿಸುವುದಾಗಿ ನಂಬಿಸಿ ಹಂತಹಂತವಾಗಿ ನಾಲ್ವರು ಅಭ್ಯರ್ಥಿಗಳಿಂದ 80 ಲಕ್ಷಕ್ಕೂ ಅಧಿಕ ಹಣವನ್ನು ನಗದು ರೂಪದಲ್ಲಿ ಮತ್ತು ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿಸಿಕೊಂಡು, ಅಭ್ಯರ್ಥಿಗಳಿಗೆ ನಕಲಿ ನೇಮಕಾತಿ ಆದೇಶಗಳನ್ನು ಅಂಚೆ ಮೂಲಕ ಹಾಗೂ ಇ-ಮೇಲ್ ಮೂಲಕ ಕಳುಹಿಸಿ, ಕೆಲಸವನ್ನು ಕೊಡಿಸದೇ ನಂಬಿಕೆ ದ್ರೋಹವೆಸಗಿ ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದರು ಎಂದರು.
ಪ್ರಕರಣದ ತನಿಖೆ ಮುಂದುವರೆಸಿದ ಸಿಸಿಬಿಯ ಓ.ಸಿ.ಡಬ್ಲ್ಯೂ (ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿ ಒಬ್ಬನನ್ನು ಮೌರ್ಯ ಜಂಕ್ಷನ್ ಬಳಿ ಹಾಗೂ ಮತ್ತೊಬ್ಬನನ್ನು ಹೊಸಕೆರೆ ಹಳ್ಳಿಯ ಬಸ್ ನಿಲ್ದಾಣದ ಬಳಿ ಬಂಧಿಸಲಾಗಿದೆ ಎಂದರು.
ಬಂಧಿತ ಇಬ್ಬರನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಕಸ್ಟಡಿಗೆ ಪಡೆದು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಇನ್ನೂ ಐವರು ಸಹಚರರು ಭಾಗಿಯಾಗಿರುವುದಾಗಿ ತಿಳಿಸಿರುತ್ತಾರೆ. ಅದರಲ್ಲಿ ಒಬ್ಬನಿಗೆ ನೊಟೀಸ್ ಅನ್ನು ಜಾರಿ ಮಾಡಿ ವಿಚಾರಣೆ ಮಾಡಲಾಗಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದರು.
ಪೊಲೀಸ್ ಅಭಿರಕ್ಷೆಗೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದ ಇತರೆ ನಾಲ್ವರು ಸಹಚರರು ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದರು.



