ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದು ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳು ಪ್ರಮುಖ ಪಟ್ಟಣಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಬೆಂಗಳೂರು ಮತ್ತು ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸ, ಕಚೇರಿ ಬಳಿ ಎರಡು ಕೆಎಸ್ಆರ್ಪಿ ತುಕಡಿಯ ಜೊತೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು, ಮೈಸೂರು ನಗರ ಸೇರಿದಂತೆ ಎಲ್ಲಾ ನಗರಗಳ ಆಯುಕ್ತರು, ಜಿಲ್ಲೆಗಳ ಎಸ್ಪಿ ಹಾಗೂ ಹಿರಿಯ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಲು ರಾಜ್ಯ ಮಹಾನಿರ್ದೇಶಕ ಅಲೋಕ್ ಮೋಹನ್ ಸೂಚಿಸಿದ್ದಾರೆ.
ಸಿಎಂ ವಿರುದ್ಧ ತೀರ್ಪು ಬಂದಿರುವುದರಿಂದ, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಬಂದೋಬಸ್ತ್ನಲ್ಲಿರುವಂತೆ ಡಿಜಿಪಿ ತಿಳಿಸಿದ್ದಾರೆ.




