ಬೆಂಗಳೂರು: ರಾಜ್ಯದಲ್ಲಿ ಬಹು ಸಂಖ್ಯಾತರಾಗಿರುವ ದಲಿತರಿಗೆ ಇಲ್ಲಿಯವರೆಗೆ ಮುಖ್ಯಮಂತ್ರಿ ಹುದ್ದೆ ಸಿಕ್ಕಿಲ್ಲ. ಈಗ ಅದಕ್ಕೆ ಸಕಾಲ ಬಂದೊದಗಿದೆ ಎಂದು ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಬಹುಮತ ಇದೆ ಇಂತಹ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಮನಸ್ಸು ಮಾಡಬೇಕು ಕಾಂಗ್ರೆಸ್ಸಿನಲ್ಲಿರುವ ಸಮುದಾಯದ ದೊಡ್ಡ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಕೆ.ಎಚ್. ಮುನಿಯಪ್ಪ ಅವರಲ್ಲಿ ಯಾರಿಗಾದರೂ ಒಬ್ಬರಿಗೆ ಈ ಹುದ್ದೆ ನೀಡಬೇಕೆಂದು ಆಗ್ರಹಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದ್ದಾರೆ ಈಗ ಅವರು ಇನ್ನೊಬ್ಬರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಅದು ದಲಿತರಿಗೆ ಈ ಸ್ಥಾನ ಲಭಿಸಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷ ಇತಿಹಾಸ ಸೃಷ್ಟಿಸಬೇಕು ಎಂದು ಮನವಿ ಮಾಡಿದರು.
ದಲಿತ ಸಮುದಾಯ ರಾಜ್ಯದಲ್ಲಿ ಬಹು ಸಂಖ್ಯಾತರಾಗಿದ್ದಾರೆ. ಕಾಂಗ್ರೆಸ್ಸಿನಲ್ಲಿ ಅನೇಕ ಮಂದಿ ಈ ಸಮುದಾಯದ ಪ್ರಭಾವಿ ನಾಯಕರುಗಳು ಇದ್ದಾರೆ. ಆದರೆ ಇಲ್ಲಿಯವರೆಗೆ ಈ ಸಮುದಾಯದ ಯಾರಿಗೂ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ. ಇದು ಅತ್ಯಂತ ವಿಷಾದದ ಸಂಗತಿಯಾಗಿದೆ. ಇನ್ನಾದರೂ ಕಾಂಗ್ರೆಸ್ ಈ ಬಗ್ಗೆ ಗಮನಹರಿಸಬೇಕು ಎಂದರು.
ಡಿಸಿಎಂ ಡಿ ಕೆ ಶಿವಕುಮಾರ್ ದಕ್ಷ ನಾಯಕ. ಅಪ್ರತಿಮ ಸಂಘಟನಾ ಚತುರ ಹಾಗೂ ಪ್ರಭಾವಿ ಸಮುದಾಯದ ಮುಖಂಡರಾಗಿದ್ದಾರೆ. ಇವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವ ವಿಚಾರದಲ್ಲಿ ಯಾವುದೇ ತಕರಾರು ಇಲ್ಲ. ಆದರೆ ಈಗ ಕಾಂಗ್ರೆಸ್ ದೊಡ್ಡ ಬಹುಮತ ಪಡೆದಿದ್ದು ದಲಿತರಿಗೆ ಅವಕಾಶ ನೀಡಬೇಕು. ನಂತರ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಆಶಿಸುವುದಾಗಿ ತಿಳಿಸಿದರು.



