ಲೋಕಸಭೆಯಲ್ಲಿ ಗಟ್ಟಿ ದನಿ ಎತ್ತಲು ಸತೀಶ್ ಜಾರಕಿಹೊಳಿ ಆರಿಸಿ: ಎಸ್.ಆರ್.ಪಾಟೀಲ್

5 years ago

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಜನಸಾಮಾನ್ಯರ ಮೇಲೆ ಬಿಜೆಪಿ ಸರ್ಕಾರ ಬರೆ ಎಳೆದಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ವಾಗ್ದಾಳಿ ನಡೆಸಿದರು.

ಬೆಳಗಾವಿ ಲೋಕಸಭಾ ಉಪಚುನಾವಣೆಯ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿರವರ ಪರ ಬೈಲಹೊಂಗಲದಲ್ಲಿ ಮತಯಾಚನೆ ಮಾಡಿದ ಅವರು, ಬಡವರ ವಿರೋಧಿ ಕೇಂದ್ರ ಸರ್ಕಾರದ ಮೇಲೆ ಲೋಕಸಭೆಯಲ್ಲಿ ಗಟ್ಟಿಯಾಗಿ ಧ್ವನಿ ಎತ್ತಲು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಬೆಳಗಾವಿಯ ಮತದಾರರನ್ನು ವಿನಂತಿಸಿದರು.

ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ಮಹಾಂತೇಶ ಕೌಜಲಗಿ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Leave a Reply