ಸಂಸ್ಕೃತಿ ಉಳಿಸಲು ಮಹನೀಯರುಗಳು ಹೆಸರು ನಾಮಕರಣ: ವಿ.ಸೋಮಣ್ಣ

3 years ago

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಾಲಿಕೆ ಸೌಧದಲ್ಲಿ ನಾಡಿನ ಹಿರಿಯ ಸಂಶೋಧಕ, ಸಾಹಿತಿ ಚಿಂತಕ ನಾಡೋಜ ಡಾ.ಎಂ.ಚಿದಾನಂದ ಮೂರ್ತಿ ಸಭಾಂಗಣವನ್ನು ಸ್ಥಳೀಯ ಶಾಸಕ, ವಸತಿ ಸಚಿವ ವಿ.ಸೋಮಣ್ಣ, ವಿಶಾಲಕ್ಷ್ಮೀ ಚಿದಾನಂದಮೂರ್ತಿ, ಹಿರಿಯ ಸಾಹಿತಿ ಸಿ.ವೀರಣ್ಣ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಶೈಲಜಾ ಸೋಮಣ್ಣ, ಕನ್ನಡಪರ ಹೋರಾಟಗಾರ ಪಾಲನೇತ್ರ ಲೋಕಾರ್ಪಣೆ ಮಾಡಿದರು.

ಇದೇ ವೇಳೆ ಮಾತಾಡಿದ ವಿ.ಸೋಮಣ್ಣ, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಯೊಂದು ಕಾಮಗಾರಿ ಯೋಜನೆಗಳಿಗೆ ರಾಷ್ಟ್ರ ಮತ್ತು ರಾಜ್ಯಕ್ಕೆ ಸೇವೆ ಸಲ್ಲಿಸಿದ ಮಹನೀಯರುಗಳ ಹೆಸರುಗಳನ್ನು ನಾಮಕರಣ ಮಾಡಲಾಗಿದೆ ಎಂದರು.

ಶ್ರೀ ಬಸವೇಶ್ವರ, ದಾಸಶೇಷ್ಠ ಕನಕದಾಸ, ಸಂಗೊಳ್ಳಿ ರಾಯಣ್ಣ, ನಾಡಪ್ರಭು ಕೆಂಪೇಗೌಡ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಶ್ರೀ ಶಿವಕುಮಾರ ಸ್ವಾಮೀಜಿ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ, ಪೇಜಾವರ ಶ್ರೀ, ನಾಡೋಜ ಚಿದಾನಂದಮೂರ್ತಿಯವರಂತಹ ಮಹನೀಯರುಗಳನ್ನು ಹೆಸರುಗಳು ಶಾಶ್ವತವಾಗಿ ಸ್ಮರಣೆ ಮಾಡಿಕೊಳ್ಳಲು ಮತ್ತು ಮುಂದಿನ ಪೀಳಿಗೆಗೆ ಮಹನೀಯರುಗಳ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಪ್ರಜೆಯಾಗಲಿ ಎಂಬ ಉದ್ದೇಶದಿಂದ ಹೆಸರುಗಳನ್ನು ನಾಮಕರಣ ಮಾಡಲಾಗಿದೆ ಎಂದರು.

ರಾಷ್ಟ್ರಕ್ಕೆ ಉಪಯುಕ್ತ ಸಂಶೋಧನೆ ಮಾಡಿರುವ ಚಿದಾನಂದಮೂರ್ತಿರವರು ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು ಎಂದು ಸಭಾಂಗಣಕ್ಕೆ ಹೆಸರಿಡಲಾಗಿದೆ. ಚಿದಾನಂದಮೂರ್ತಿರವರು ಸಂಶೋಧನೆಯಲ್ಲಿ ವಾಸ್ತವಾಂಶಕ್ಕೆ ಹೆಚ್ಚು ಒತ್ತು ನೀಡಿ, ರಾಜ್ಯದ ಮೂಲೆಮೂಲೆಗೆ ತೆರಳಿ ಕನ್ನಡ ನಾಡಿನ ಇತಿಹಾಸವನ್ನು ಸಂಶೋಧನೆ ಮಾಡಿದ್ದಾರೆ ಎಂದರು.

ಮಾಗಡಿರೋಡ್ ಪೊಲೀಸ್ ಠಾಣೆಯನ್ನು ನವೀಕರಣ ಮಾಡಲಾಗಿದೆ. ಡಿ.ಸಿ.ಪಿ. ಕಛೇರಿಯನ್ನು ಮಾಗ ಡಿರೋಡ್ ನಲ್ಲಿ ಪ್ರಾರಂಭಿಸಲಾಗಿದೆ. 2000 ವಿದ್ಯಾರ್ಥಿಗಳಿಗೆ ಅವಕಾಶ ಇರುವ ಪ್ರಥಮ ದರ್ಜೆ ಕಾಲೇಜು ಹಾಗೂ 1ಕಿಲೋ ಮೀಟರ್ ಉದ್ದದ ಮೇಲು ಸೇತುವೆಯನ್ನು, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣವನ್ನು ಜನವರಿ 29ರಂದು ಲೋಕಾರ್ಪಣೆ ಮಾಡಲಾಗುವುದು ಎಂದರು.

ನಾಯಂಡಹಳ್ಳಿ ಕೆರೆಯನ್ನು ಶುದ್ಧೀಕರಿಸಲಾಗಿದೆ. ದಾಸರಹಳ್ಳಿ ವಾರ್ಡ್ ನಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು 16ನೇ ತಾರೀಖು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಆದಿತ್ಯನಾಥ್ ಉದ್ಘಾಟನೆ ಮಾಡಲಿದ್ದಾರೆ. ನಾಯಂಡಹಳ್ಳಿಯಲ್ಲಿ 200 ಹಾಸಿಗೆಯ ಆಸ್ಪತ್ರೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ರವರ ಹೆಸರು ನಾಮಕರಣ ಮಾಡಲಾಗುವುದು ಎಂದರು.

ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಹೆಚ್.ಜಯರಾಮ್, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ದಾಸೇಗೌಡ, ಜಯರತ್ನ, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

Leave a Reply