ಬೆಂಗಳೂರು: ಲೈಂಗಿಕ ನಿಂದನೆ ಆರೋಪ ಎದುರಿಸುತ್ತಿರುವ ಟಾಲಿವುಡ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ನಗರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಿ ವಿಚಾರಣೆ ನಡೆಸಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಗಾಗಿ ಹೈದರಾಬಾದ್ ಪೊಲೀಸರು ನಾಲ್ಕು ವಿಶೇಷ ತಂಡಗಳು (ಎಸ್ಒಟಿ) ರಚಿಸಲಾಗಿತ್ತು. ಇದರಲ್ಲಿ ಒಂದು ತಂಡ ಜಾನಿ ಮಾಸ್ಟರ್ ಬೆಂಗಳೂರಿನಲ್ಲಿದ್ದ ಮಾಹಿತಿ ಪಡೆದು ವಶಕ್ಕೆ ಪಡೆದಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ (ಪೋಸ್ಕೋ) ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಘಟನೆ ನಡೆದಾಗ ಸಂತ್ರಸ್ತೆ ಅಪ್ರಾಪ್ತ ವಯಸ್ಕಳಾಗಿದ್ದಳು ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಆಯೋಗವನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ತೆಲಂಗಾಣ ಮಹಿಳಾ ಆಯೋಗ ತಿಳಿಸಿದೆ. ರಾಷ್ಟ್ರಪ್ರಶಸ್ತಿ ವಿಜೇತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನೃತ್ಯ ಸಂಯೋಜಕಿಯ ಮೇಲೆ ಪದೇ ಪದೇ ಅತ್ಯಾಚಾರ, ಕಿರುಕುಳ ಮತ್ತು ಹಲ್ಲೆ ಮಾಡಿದ ಆರೋಪವಿದೆ. ಮತ್ತೊಂದೆಡೆ, ತೆಲುಗು ಫಿಲ್ಡ್ ಚೇಂಬರ್ ಆಫ್ ಕಾಮರ್ಸ್ (ಟಿಎಫ್ಸಿಸಿ) ಕೂಡ ಪ್ರಕರಣವನ್ನು ಪರಿಶೀಲನೆ ನಡೆಸುತ್ತಿದೆ.
ಜಾನಿ ಮಾಸ್ಟರ್ ದೇಶವನ್ನು ತೊರೆಯಲು ಯೋಜಿಸುತ್ತಿದ್ದ ಎನ್ನಲಾಗಿದೆ. ಆತ ಉತ್ತರ ಭಾರತಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಸುಳಿವಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.




