ಬೆಂಗಳೂರು: ವಾರ್ಷಿಕ 40 ಲಕ್ಷ ರೂಪಾಯಿ ಮೀರಿ ಯುಪಿಐ ಪಾವತಿ ಮೂಲಕ ವಹಿವಾಟು ನಡೆಸಲಾಗಿದ್ದು ಜಿ ಎಸ್ ಟಿ ನೋಂದಣಿ ಇಲ್ಲದೆ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಸಣ್ಣಪುಟ್ಟ ವ್ಯಾಪಾರಿಗಳಿಗೆ ನೀಡಲಾಗಿರುವ ನೋಟೀಸ್ ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವ್ಯಾಪಾರಿಗಳು ಇದೀಗ ರಾಜ್ಯ ಸರ್ಕಾರದ ವಿರುದ್ಧ ಸಮರ ಘೋಷಣೆ ಮಾಡಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಹಾಲು ಹಾಗೂ ಅದರ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸುವ ಬೆದರಿಕೆ ಹಾಕಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ನೋಟಿಸ್ ಗಳನ್ನು ವಾಪಸ್ ಪಡೆಯುವ ಮೂಲಕ ವರ್ತಕ ಎಂದಿನಂತೆ ತಮ್ಮ ವಹಿವಾಟು ನಡೆಸಲು ಅವಕಾಶ ನೀಡಬೇಕು ಇಲ್ಲದೆ ಹೋದರೆ ನಾಳೆಯಿಂದ ಹಾಲಿನ ಉತ್ಪನ್ನಗಳನ್ನು ಬಹಿಷ್ಕರಿಸುವ ಮೂಲಕ ಎರಡು ದಿನಗಳ ಸಾಂಕೇತಿಕ ಹೋರಾಟ ನಡೆಸಲಾಗುವುದು. ಜು.25 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ಭಾರೀ ಪ್ರಮಾಣದ ಚರ್ಚೆಗೆ ಗ್ರಾಸವಾಗಿದೆ. ಜೀವನೋಪಾಯಕ್ಕಾಗಿ ಬೀದಿಬದಿ ವ್ಯಾಪಾರ ಮಾಡುವ ಜನರಿಂದಲೂ ತೆರಿಗೆ ವಸೂಲಿ ಮಾಡಲು ಕ್ರಮ ಕೈಗೊಂಡಿರುವುದು ಅಸಮಂಜಸ. ರಾಜ್ಯಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ಸಂಪನೂಲ ಕ್ರೋಢೀಕರಣಕ್ಕಾಗಿ ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ಮುಗಿಬಿದ್ದಿದೆ ಎಂದು ಆರೋಪಿಸಿದ್ದಾರೆ.




