ಶಿವಮೊಗ್ಗ: ಕರ್ನಾಟಕ ಇನ್ಸ್ಟಿಟ್ಯೂಟ್ ಆಪ್ ಕೋ-ಅಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ರಾಜ್ಯದ ಸಹಕಾರ ಸಂಘದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದೂರಶಿಕ್ಷಣ-ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಕುರಿತು 6 ತಿಂಗಳ ತರಬೇತಿಯನ್ನು ಪ್ರಾರಂಭಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತ ಆಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಗಳನ್ನು ಕರ್ನಾಟಕ ಇನ್ಸ್ವಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ ವಿನೋಬನಗರ,2ನೇ ಹಂತ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಜೂನ್- 15 ರೊಳಗಾಗಿ ಸಲ್ಲಿಸುವಂತೆ ಸಂಸ್ಥೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-248873 / 7022429440 ಅಥವಾ ಆನ್ ಲೈನ್ ಪ್ರವೇಶಾತಿಯ ಲಿಂಕ್ www.kscfdcm.co.in ನ್ನು ಸಂಪರ್ಕಿಸಬಹುದು.




