ಚಿತ್ರದುರ್ಗ: ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (PMRKVY) ಯಡಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು 3 ದಿನಗಳ ತರಬೇತಿಯನ್ನು ಇದೇ ಮಾರ್ಚ್ 05 ರಿಂದ 07 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಆಸಕ್ತ ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ತರಬೇತಿ ಕಾರ್ಯಕ್ರಮದಲ್ಲಿ ಮೊದಲನೇ ದಿನ ನೆಟಾಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞ ಅಂಜಿನಪ್ಪ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳಗಳಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಸಮರ್ಪಕ ಅಳವಡಿಕೆ ಮತ್ತು ಅವುಗಳ ನಿರ್ವಹಣೆ ಹಾಗೂ ರಸಾವರಿ ಪದ್ಧತಿ ಕುರಿತು ಮಾಹಿತಿ ನೀಡುವರು.
ಎರಡನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಹಾಗೂ ಕೀಟಶಾಸ್ತ್ರಜ್ಞರಾದ ಡಾ. ದಾನ ರೆಡ್ಡಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಕುರಿತು ಮಾಹಿತಿ ನೀಡುವರು.
ನಂತರ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಸಾವಯವ ಪದ್ಧತಿಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಲ್ಲಿ ಅನುಸರಿಸಬೇಕಾದ ನೀರು ಮತ್ತು ಪೋಷಕಾಂಶಗಳ ನಿರ್ವಹಣೆ ಕುರಿತು ಮಾಹಿತಿ ನೀಡುವರು.
ತರಬೇತಿಯ ಮೂರನೇ ದಿನ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಒಬ್ಬೂರಿನ ಶ್ರೀ ಹನುಮಂತ ನಾಯಕ್ ಅವರು ಜೇನು ಕೃಷಿ ಪ್ರಾಮುಖ್ಯತೆ, ಜೇನಿನ ಉಪ ಉತ್ಪನ್ನಗಳು ಮತ್ತು ಜೇನು ಕುಟುಂಬ ನಿರ್ವಹಣೆ ಹಾಗೂ ಎರೆ ಗೊಬ್ಬರ ತಯಾರಿಕೆ ಕುರಿತು ಕುರಿತು ಮಾಹಿತಿ ನೀಡುವರು.
ಆಸಕ್ತ 50 ಜನ ರೈತ ಬಾಂಧವರು ಮೊಬೈಲ್ ಸಂಖ್ಯೆ 8277931058 ಗೆ ಕರೆ ಮಾಡಿ ನೋಂದಾಯಿಸಿಕೊಂಡು ತಮ್ಮ ಆಧಾರ್ ಅಥವಾ ಎಫ್‍ಐಡಿಯೊಂದಿಗೆ ಈ ತರಬೇತಿಯಲ್ಲಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.




