ಮೊದಲ ಬಾರಿಗೆ ಸರ್ಕಾರದ ಆದೇಶದಂತೆ ವರ್ಗಾವಣೆ
ಹಾಸನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1, ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳ 2025-26 ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಪ್ರಾಧಿಕಾರಿಗಳನ್ನಾಗಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅದರ ಪ್ರಕಾರ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್ ಪೂರ್ಣಿಮಾ ಅವರ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನಲ್ಲಿ ಹೊರಡಿಸಿದ ಅಧಿಸೂಚನೆಯಂತೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ವರ್ಗಾವಣೆಗೆ ಸಂಬಂಧಿಸಿದ ನೌಕರರು ವರ್ಗಾವಣೆ ಬಯಸಿದ ಸ್ಥಳಗಳಿಗೆ ಕೌನ್ಸಿಲಿಂಗ್ ನಡೆಸಲಾಯಿತು.
ಜು.25 ರಂದು ವಿಶೇಷ ಪ್ರಕರಣಗಳಾದ ಅಂಗವಿಕಲತೆ ಮತ್ತು ದೈಹಿಕ ಅಸಮರ್ಥತಾ ಪ್ರಕರಣಗಳು, ಪತಿ- ಪತ್ನಿ ಪ್ರಕರಣಗಳು ಮತ್ತು 12 ವರ್ಷದೊಳಗಿನ ಮಕ್ಕಳಿರುವ ಒಂಟಿ ಪೋಷಕರು / ಒಂಟಿ ಮಹಿಳೆ / ವಿಕಲಚೇತನ ಮಕ್ಕಳಿರುವ ಪೋಷಕರುಗಳಿಗೆ ಶೇ.3 ರ ಮಿತಿಯಲ್ಲಿ ನಡೆಸಲಾಯಿತು.
ಜು. 28 ರ ಪೂರ್ವಾಹ್ನ ವಿಶೇಷ ವರ್ಗಾವಣಾ ಪ್ರಕರಣಗಳಿಂದ ಬಾಧಿತರಾದ ನೌಕರರುಗಳಿಗೆ ಹಾಗೂ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಶೇ.3 ರ ಮಿತಿಯಲ್ಲಿ ಹಾಗೂ ಜು.29 ರಂದು 5 ವರ್ಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಶೇ.6 ರ ಮಿತಿಯಲ್ಲಿ ಪಾರದರ್ಶಕವಾಗಿ ನಿಯಮಾನುಸಾರ ವರ್ಗಾವಣೆ ಕೌನ್ಸಿಲಿಂಗ್ ನಡೆಸಲಾಯಿತು.
ಈ ವೇಳೆಯಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆಯಾದ ಸಂಬಂಧಪಟ್ಟ ನೌಕರರಿಗೆ ವರ್ಗಾವಣೆ ಆದೇಶವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಕೆ.ಹೆಚ್ ಕೃಷ್ಣಮೂರ್ತಿ ಹಾಜರಿದ್ದರು.



