ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ದಯಾನಂದನಗರ ವಾರ್ಡ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ ವಾರ್ಡ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಮಾಜಿ ಶಿಕ್ಷಣ ಸಚಿವ, ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸಕ್ರಿಯ ಸದಸ್ಯತ್ವ ಪಡೆದ 63 ಸದಸ್ಯರಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಸಾವಿತ್ರಿ ಸುರೇಶ್ ಕುಮಾರ್ ಮತ್ತು ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎಂ.ಮುನಿರಾಜುರವರು, ಶಕೀಲ ಮುನಿರಾಜುರವರು ಸಕ್ರಿಯ ಬಿಜೆಪಿ ಸದಸ್ಯರಿಗೆ ಪ್ರಮಾಣಪತ್ರ ನೀಡಿದರು.
ಇದೇ ವೇಳೆ ಮಾತನಾಡಿದ ನಾಯಕರು, ವಿಶ್ವದ ಅತಿಡೊಡ್ಡ ಸದಸ್ಯರನ್ನು ಹೊಂದಿರುವ ಪಕ್ಷ ಬಿಜೆಪಿ. ಪ್ರಧಾನಿ ನರೇಂದ್ರಮೋದಿರವರು, ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾರವರ ಆದೇಶದ ಮೇರೆಗೆ ಬಿಜೆಪಿ ಸದಸ್ಯತ್ವ ನೋಂದಾಣೆಗೆ ಚಾಲನೆ ನೀಡಲಾಗಿದೆ ಎಂದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ನಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ ಮತ್ತು ಯೋಜನೆಗಳು ಕುರಿತು ತಿಳಿಸಿ, ದೇಶ ಅಭಿವೃದ್ದಿಗೆ ಬಲಿಷ್ಠ ಭಾರತ ನಿರ್ಮಾಣದಲ್ಲಿ ಬಿಜೆಪಿ ಕೇಂದ್ರ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ತಿಳಿಸಿ ಬಿಜೆಪಿ ಸದಸ್ಯತ್ವ ಮೊಬೈಲ್ ಆಪ್ ನೋಂದಣಿ ಮಾಡಲಾಯಿತು ಎಂದರು.
ಬಿಜೆಪಿ ಸದಸ್ಯತ್ವ ಪಡೆದ ಕಾರ್ಯಕರ್ತ ನೂರು ಜನರನ್ನು ಬಿಜೆಪಿ ಸದಸ್ಯರನ್ನ ನೋಂದಾಣೆ ಮಾಡಿದವರನ್ನು ಸಕ್ರಿಯ ಸದಸ್ಯ ಎಂದು ಗುರುತಿಸಲಾಗಿದೆ. 100 ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿದ ಸಕ್ರಿಯ ಸದಸ್ಯನಿಗೆ ಪ್ರಮಾಣ ಪತ್ರ ಮತ್ತು ಅಭಿನಂದನೆ ಕಾರ್ಯಕ್ರಮ ನಡೆದಿದೆ ಎಂದರು.
ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೆ ಶಕ್ತಿ, ಸಕ್ರಿಯ ಸದಸ್ಯತ್ವ ಪಡೆದ ಬಿಜೆಪಿ ಕಾರ್ಯಕರ್ತರು ಪಕ್ಷ ಸಂಘಟನೆಗಾಗಿ ಅವರ ಶ್ರಮ ಅಪಾರ ಎಂದರು.
ಮಂಡಲ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ, ಸಹ ಸಂಚಾಲಕ ಆನಂದ್, ಸಂಚಾಲಕರು ಪ್ರವೀಣ್ ಉಪಸ್ಥಿತರಿದ್ದರು.



