ಗೋವಿಂದರಾಜನಗರ ಮಂಡಲ ಬಿಜೆಪಿ ಕೆ.ಉಮೇಶ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಕ್ರಮ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 76ನೇ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕರಾದ ಕೆ ಉಮೇಶ್ ಶೆಟ್ಟಿ ಪೌರಕಾರ್ಮಿಕರ ಹಸ್ತದಿಂದ ಧ್ವಜಾರೋಹಣವನ್ನು ನೆರವೇರಿಸಿ, ತದನಂತರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಾರ್ವಜನಿಕರಿಗೆ ಸಂಗೊಳ್ಳಿ ರಾಯಣ್ಣರವರ ಜೀವನ ಚರಿತ್ರೆ ಪುಸ್ತಕ ವಿತರಣೆ ಮತ್ತು ಪೌರಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದೇ ವೇಳೆ ಮಾತನಾಡಿದ ಕೆ.ಉಮೇಶ್ ಶೆಟ್ಟಿ, ಬ್ರಿಟಿಷರ ಆಳ್ವಿಕೆ ಮುಕ್ತ ಮತ್ತು ಸ್ವಾತಂತ್ರ್ಯ ಸಂಗ್ರಾಮದ ನಂತರ ದೇಶ ಸ್ವಾತಂತ್ರ್ಯವಾಯಿತು. ಭಾರತರತ್ನ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ರವರು ನಮ್ಮ ದೇಶಕ್ಕೆ ಸಂವಿಧಾನ ಎಂಬ ಪವಿತ್ರ ಗ್ರಂಥವನ್ನು ಕೊಡುಗೆಯಾಗಿ ನೀಡಿದರು ಎಂದರು.
ನಮ್ಮ ದೇಶದ ಪ್ರಜಾಪ್ರಭುತ್ವದ ಬುನಾದಿಯಾದ ʼಸಂವಿಧಾನʼ ಜಾರಿಗೆ ಬಂದ ಈ ದಿನದಂದು ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ದೇಶಕ್ಕೆ ಸಮರ್ಥ ಸಂವಿಧಾನ ನೀಡಿದ ಸರ್ವ ಮಹನೀಯರನ್ನೂ ಸ್ಮರಿಸೋಣ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ದೇಶ ಭಕ್ತರು ಪ್ರಾಣತೆತ್ತರು. ದೇಶದ ಪ್ರತಿಯೊಬ್ಬ ಪ್ರಜೆಯೂ ಮಹನೀಯರುಗಳನ್ನು ಸ್ಮರಣೆ ಮಾಡಿಕೊಳ್ಳಬೇಕು ಮತ್ತು ಅವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಸಾಗಬೇಕು ಎಂದರು.
ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ರಾಮಪ್ಪ, ಗಂಗಬೈರಯ್ಯ, ಪಕ್ಷದ ಹಿರಿಯ ಮುಖಂಡರಾದ ನಂಜಪ್ಪ, ವೆಂಕಟೇಶ್, ಪುಟ್ಟಸ್ವಾಮಿಗೌಡ, ವಜ್ರಪ್ಪ, ಭಾಸ್ಕರ್, ಜಗದೀಶ್, ಲಕ್ಷ್ಮೀ ನಾರಾಯಣ್, ಆರಸಪ್ಪ, ಚೆಲುವಾಚಾರ್, ಬಾಲಾಜಿ ಪಿ.ಎಸ್,ಶೇಖರಪ್ಪ, ರವೀಂದ್ರ ನರಸಿಂಹ ಮೂರ್ತಿ, ಕನ್ನಡ ಮಂಜು, ಉಮೇಶ್ ಗಂಗಬೈರಯ್ಯ, ಪಕ್ಷದ ಮಹಿಳಾ ಮುಖಂಡರಾದ ಪನಿವೇಣಿ, ಗೋವಿಂದರಾಜನಗರ ಮಂಡಲ ರೈತ ಮೋರ್ಚಾ ಅಧ್ಯಕ್ಷ ರಾಘವೇಂದ್ರ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.




