ಧಾರವಾಡದಲ್ಲಿ ಡಿ. 16 ರಂದು 525 ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮ

2 years ago

ಧಾರವಾಡ: ಸಿಎಂ ಸಿದ್ದರಾಮಯ್ಯ ಅವರು ಡಿಸೆಂಬರ್ 16 ರಂದು ಸಂಜೆ ಧಾರವಾಡಕ್ಕೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.

ಧಾರವಾಡದ ನೂತನ ಅತಿಥಿ ಗೃಹದಲ್ಲಿ ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ದಿನಾಂಕ 16 ರಂದು ಸಂಜೆ ಕೆಸಿಡಿ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡ ಬೃಹತ್ ಕಾರ್ಯಕ್ರಮದಲ್ಲಿ ಸಿಎಸ್ಆರ್ ಅನುದಾನದಲ್ಲಿ ಅಂಗವಿಕಲರಿಗೆ 500 ಕ್ಕೂ ಹೆಚ್ಚು ತ್ರಿಚಕ್ರ ವಾಹನ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡುವರು ಎಂದರು.

ಜೊತೆಗೆ, ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಹಾಗೂ ಐದು ಗ್ಯಾರಂಟಿಗಳ ಮಾಹಿತಿ ಮಳಿಗೆಗಳನ್ನು ಹಾಕಲಾಗುವುದು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಜರುಗಲಿವೆ ಎಂದು ಮಾಹಿತಿ ನಿಡಿದರು.

ಕಾರ್ಯಕ್ರಮ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಮುಖ್ಯ ವೇದಿಕೆ, ಆಸನದ ವ್ಯವಸ್ಥೆ, ಅತಿಥಿಗಳ ಕಾರ್ಯಕ್ರಮ, ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಕುರಿತಂತೆ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ಇನ್ನೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುದು ಎಂದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರನ್, ಕಾರ್ಮಿಕ ಆಯುಕ್ತ ಡಾ.ಗೋಪಾಲಕೃಷ್ಣ, ಜಿಲ್ಲಾ ಪಂಚಾಯತ್ ಸಿಇಓ ಸ್ವರೂಪ ಟಿ.ಕೆ. ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply