ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರ ಸಭಾಂಗಣದ ನಿರ್ವಹಣೆಗಾಗಿ ಬಾಡಿಗೆ ದರವನ್ನು ರೂ.3000 ದಿಂದ ರೂ.10,000ಕ್ಕೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣವನ್ನು ದುರಸ್ಥಿಪಡಿಸಲಾಗಿದೆ. ಹಿಂದೆ ನಿಗದಿಪಡಿಸಿರುವ ಬಾಡಿಗೆ ಮೊತ್ತ ಅತೀ ಕಡಿಮೆಯಾಗಿದ್ದು, ಇದರ ವಿದ್ಯುತ್ ವೆಚ್ಚ ಸೇರಿದಂತೆ ಇತರೆ ವೆಚ್ಚಗಳ ನಿರ್ವಹಣೆಗಾಗಿ ದರಪರಿಷ್ಕರಣೆ ಮಾಡಲಾಗಿದೆ.
ಆದ್ದರಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಕಂದಾಯ ಇಲಾಖೆ ಹೊರತುಪಡಿಸಿ, ಇನ್ನುಳಿದ ಸರ್ಕಾರಿ, ಅರೆ ಸರ್ಕಾರಿ ಇಲಾಖೆ, ಸಂಘ-ಸಂಸ್ಥೆ, ಮಂಡಳಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ದಿನದ ಬಾಡಿಗೆ ಮೊತ್ತ ರೂ.10 ಸಾವಿರ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.




