ವೈಜ್ಞಾನಿಕ ಹಾಗೂ ಗುಣಮಟ್ಟದ ಕಾಮಗಾರಿಗೆ ತಾಕೀತು ಮಾಡಿದ ಸಚಿವ
ಧಾರವಾಡ: ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳದ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ ಸ್ಥಿತಿಗತಿ ಪರಿಶೀಲನೆ ನಡೆಸಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಇನಾಮಹೊಂಗಲ್, ಹನಸಿ ಹಾಗೂ ಶಿರಕೋಳ, ಬಳ್ಳೂರ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು. ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ ಇವರ ಮನೆಗಳು ಹಾನಿಯನ್ನು ಪರಿಶೀಲಿಸಿ ಶೀಘ್ರ ಮನೆಹಾನಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಹನಸಿ ಹಾಗೂ ಶಿರಕೋಳ ಮಧ್ಯದಲ್ಲಿ ತುಪ್ಪರಿ ಹಳ್ಳ ಹರಿವಿನ ತೀವೃತೆ ಹಾಗೂ ಹಾನಿಗೀಡಾದ ಪ್ರದೇಶವನ್ನು ಸಚಿವರು ವೀಕ್ಷಿಸಿದರು. ಬಳ್ಳೂರ ಗ್ರಾಮದಲ್ಲಿ ಮಳೆಹಾನಿಗೊಳಗಾದ ವಾಸುದೇವ ಬೆಳ್ಳಿಕಟ್ಟಿ ಹಾಗೂ ರೇಣ್ಣಪ್ಪ ಕುಂಬಾರ ಮನೆಗಳಿಗೆ ಭೇಟಿ ನೀಡಿದರು. ತಿರ್ಲಾಪುರ ಗ್ರಾಮದಿಂದ ಅಳಗವಾಡಿ ಗ್ರಾಮದ ಮದ್ಯ ತುಪ್ಪರಿ ಹಳ್ಳವು ಬೆಣ್ಣೆ ಹಳಕ್ಕೆ ಕೂಡುವ ಸ್ಥಾಳವನ್ನು ಸೇತುವೆ ಮೇಲಿನಿಂದ ವೀಕ್ಷಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಲಾಡ್, 2019ರಲ್ಲಿ ಸರಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಆದರೂ ನೀರು ಗ್ರಾಮಗಳಿಗೆ ಹಾಗೂ ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಹಾನಿಯಾಗುತ್ತಿದೆ ಎಂದರು.
ವೈಜ್ಞಾನಿಕವಾಗಿ ಮೇಲ್ಸೇತುವೆ ಎತ್ತರಿಸುವುದು ಹಾಗೂ ಹಲವೆಡೆ ಬ್ಯಾರೇಜಗಳನ್ನು ನಿರ್ಮಿಸಿ ಮುಂದಿನ ದಿನಮಾನಗಳಲ್ಲಿ ಜನರಿಗೆ ರೈತರಿಗೆ ತೊಂದರೆ ಆಗದಂತೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು. ಮಳೆಗಾಲದ ನಂತರ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. ವೈಜ್ಞಾನಿಕ ಹಾಗೂ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು. ತಾಂತ್ರಿಕತೆ ಅರಿತು ಟೆಂಡರ್ ಕರೆಯುವುದು ಸೂಕ್ತ ಎಂದರು.
ತುಪ್ಪರಿಹಳ್ಳ 65 ಹಾಗೂ ಬೆಣ್ಣಿಹಳ್ಳ 140 ಕಿ.ಮೀ. ಹರಿದಿದೆ. ಹಳ್ಳದಗುಂಟ ಹಾನಿ ಮಾಡುತ್ತಿವೆ. ಈ ಉಭಯ ಹಳ್ಳಗಳಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನು ಸಂಗ್ರಹಿಸಿ ಸದ್ಬಳಕೆಗೆ ಯೋಜನೆ ರೂಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು.




