ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು, ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ರಾಜ್ಯದ ಎಲ್ಲಾ ಗ್ರಾಮಪಂಚಾಯತಿಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ 26, ಏಪ್ರಿಲ್ 24, ಆಗಸ್ಟ್ 15 ಮತ್ತು ಅಕ್ಟೋಬರ್ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ.
ಗ್ರಾಮೀಣ ಮಟ್ಟದಲ್ಲಿ ಸಮರ್ಥ ಆಡಳಿತ ನೀಡುವ ನಿಟ್ಟಿನಲ್ಲಿ ಗ್ರಾಮಸಭೆ ನಡೆಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
– ಗ್ರಾಮ ಪಂಚಾಯತಿಗಳಲ್ಲಿ ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯ
– ಜವಾಬ್ದಾರಿ ನಕ್ಷೆಯನುಸಾರ ಅನುಷ್ಠಾನಗೊಳಿಸಬೇಕಾದ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು
– ಗ್ರಾಮಸಭೆಗೂ ಒಂದು ತಿಂಗಳು ಮುನ್ನ ಜನವಸತಿ ಸಭೆ ಹಾಗೂ ವಾರ್ಡ್ ಸಭೆ ಆಯೋಜಿಸಬೇಕು
– ತಾಲ್ಲೂಕು ಪಂಚಾಯತಿಯ ಕಾರ್ಯಾನಿರ್ವಾಹಕ ಅಧಿಕಾರಿಗಳಿಗೆ ಗ್ರಾಮ ಸಭೆ ಆಯೋಜಿಸಲು ಸೂಚನೆ
– ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿ
– ಗ್ರಾಮ ಪಂಚಾಯತಿಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಈ ಗ್ರಾಮ ಸಭೆಗಳು ಸಹಾಯಕ
– ಗ್ರಾಮೀಣ ಪ್ರದೇಶದ ಬಡ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಗಳನ್ನು ತಲುಪಿಸಲು ನಿರ್ದೇಶನ
ಈ ಗ್ರಾಮ ಸಭೆಗಳಲ್ಲಿ ನೀರು ಸರಬರಾಜು ನಿರ್ವಹಣೆ, ಮತ್ತು ನೈರ್ಮಲ್ಯ ಸಮಿತಿಯಿಂದ ಶೌಚಾಲಯಗಳ ನಿರ್ಮಾಣ ಮಾಹಿತಿ, ಅಂಗನವಾಡಿ ಕೇಂದ್ರದ ಚಟುವಟಿಕೆಗಳ ಬಗ್ಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವ ಕುರಿತು ಚರ್ಚಿಸಲು ಸೂಚಿಸಲಾಗಿದೆ.
ಮಹಾತ್ಮ ಗಾಂಧಿ ಆಶಯದಂತೆ ಗ್ರಾಮ ಸ್ವರಾಜ್ಯಕ್ಕೆ ಒತ್ತು ನೀಡಿ, ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲು ನಮ್ಮ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ



