ಪಾಕ್ ಗೆಲುವು ಆಚರಿಸಿದ್ದ ವಿದ್ಯಾರ್ಥಿಗಳು: ದೂರು ದಾಖಲು

4 years ago

ಶ್ರೀನಗರ: ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ವಿಜಯೋತ್ಸವ ಆಚರಿಸಿದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ 2 ದೂರುಗಳನ್ನು ದಾಖಲಿಸಿದ್ದಾರೆ.

ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಎಸ್ಕೆಐಎಂಎಸ್ ಸೌರಾದ ಹಾಸ್ಟೆಲ್ ವಿದ್ಯಾರ್ಥಿಗಳ ವಿರುದ್ಧ ದೂರುಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದು, UAPA ಅಡಿಯಲ್ಲಿ ಕರಣ್ ನಗರ ಮತ್ತು ಸೌರಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ. ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಪಾಕ್ ಗೆದ್ದ ನಂತರ ಸಂಭ್ರಮಾಚರಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.

Leave a Reply