ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿರವರಿಂದ ಬಿರುಸಿನ ಪ್ರಚಾರ

3 years ago

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಶಾಂತನಗರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಉಮೇಶ್ ಶೆಟ್ಟಿ ಸಾರ್ವಜನಿಕರು ಮತ್ತು ಮನೆ, ಮನೆಗೆ ತೆರಳಿ ಮತಯಾಚನೆ ಮಾಡಿದರು.

ಸಾರ್ವಜನಿಕರು ಮತ್ತು ಹೋಟೆಲು, ಅಂಗಡಿ ಮತ್ತು ಬೀದಿ ಬದಿಯ ವ್ಯಾಪಾರಿಗಳ ಬಳಿ ತೆರಳಿ ಗೋವಿಂದರಾಜನಗರ ಅಭಿವೃದ್ದಿ ಕಾರ್ಯಗಳ ನೋಡಿ ಮತ ನೀಡಿ ಎಂದು ವಿನಂತಿ ಮಾಡಿದರು.

ಇದೇ ಸಂದರ್ಭದಲ್ಲಿ ಕೆ.ಉಮೇಶ್ ಶೆಟ್ಟಿ ಮಾತನಾಡಿ, ಕಳೆದ ಐದು ವರ್ಷದಲ್ಲಿ ವಸತಿ ಸಚಿವರಾದ ವಿ.ಸೋಮಣ್ಣರವರ ನೇತೃತ್ವದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ರಾಜ್ಯದ ಮಾದರಿ ವಿಧಾನಸಭಾ ಕ್ಷೇತ್ರ ಎಂಬ ಕೀರ್ತಿಗಳಿಸಿದೆ. ಗೋವಿಂದರಾಜ ನಗರ ವಾರ್ಡ್ ಮತ್ತು ನಾಗರಭಾವಿ ವಾರ್ಡ್ಗಳಲ್ಲಿ ಎರಡು ಬಾರಿ ಬಿಬಿಎಂಪಿ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು

ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ . ಅಭಿವೃದ್ದಿಯೆ ಮೂಲಮಂತ್ರ ನಮ್ಮದು. ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ರಾಷ್ಟ್ರ ಮತ್ತು ರಾಜ್ಯ ಅಭಿವೃದ್ದಿ ಪಥದತ್ತ ಸಾಗುತ್ತಿದೆ. ಮತದಾರರು ಬುದ್ದಿವಂತರು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು ಅಭಿವೃದ್ದಿ ಪರ ಇರುವ ಬಿಜೆಪಿ ಪಕ್ಷ ಬೆಂಬಲಿಸುತ್ತಾರೆ ಎಂದು ಹೇಳಿದರು.

ಸ್ಥಳೀಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply