ಸಾಂವಿಧಾನಿಕ ಹುದ್ದೆಯಲ್ಲಿರುವ ವಿರೋಧ ಪಕ್ಷದ ನಾಯಕ ಶ್ರೀ Rahul Gandhi ಅವರನ್ನು “ನೀವು ನಿಜವಾದ ಭಾರತೀಯರಾ” ಎಂದು ಸುಪ್ರೀಕೋರ್ಟಿನ ನ್ಯಾಯಾಧೀಶರು ಪ್ರಶ್ನಿಸಿರುವುದು ದೇಶದಲ್ಲಿ ನ್ಯಾಯಾಂಗದ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಗೆ ನೀಡಿದ ಬೆಂಬಲ…!
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಭಾರತದ ವಿಪಕ್ಷ ನಾಯಕರನ್ನು ಈ ದೇಶದ ಸಂವಿಧಾನ “shadow prime minister” ಎಂದು ಗುರುತಿಸುತ್ತದೆ. ಈ ದೇಶದ “shadow prime minister” ಆಗಿರುವ ರಾಹುಲ್ ಗಾಂಧಿಯಂತಹ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯನ್ನು, ಮತ್ತೊಬ್ಬ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ “ನೀವು ಭಾರತೀಯರಾ? ಎಂದು ಪ್ರಶ್ನಿಸಿರುವುದು ದುರಾದೃಷ್ಟಕರ. ಇದು ದೇಶದ ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ.
ಚೀನಾ ದೇಶ ಗಾಲ್ವಾಮಾ ಕಣಿವೆಯಲ್ಲಿ ಎರಡು ಸಾವಿರ ಚದರ ಕಿಲೋಮೀಟರ್ ಕ್ಕಿಂತ ಹೆಚ್ಚು ಭೂಪ್ರದೇಶವನ್ನ ಆಕ್ರಮಿಸಿಕೊಂಡಿರುವುದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಸ್ಪಷ್ಟನೆ ಕೇಳಲಾಗಿತ್ತು. ಈ ಕುರಿತು ಸಂಸತ್ತಿನಲ್ಲೇ ಸುಧೀರ್ಘ ಚರ್ಚೆ ನಡೆಸಲಾಗಿದೆ. 38 ಸಾವಿರ ಚದರ ಕಿಲೋಮೀಟರ್ ಭೂಪ್ರದೇಶ ಆಕ್ರಮಿಸಿಕೊಂಡಿರುವುದನ್ನು ಸದನದಲ್ಲೇ ಕೇಂದ್ರದ ವಿದೇಶಾಂಗ ರಾಜ್ಯ ಸಚಿವರಾಗಿದ್ದ ಮುರುಳಿಧರನ್ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಇದೇ ವಿಷಯದಲ್ಲಿ ಸುಪ್ರೀಕೋರ್ಟ್ ನ ನ್ಯಾಯಾಧೀಶರು ರಾಜಕೀಯ ನಾಯಕರಂತೆ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ.
ದೇಶದ ಸಂವಿಧಾನ ನೀಡಿದ ಸಾಂವಿಧಾನಿಕ ಹುದ್ದೆಯಲ್ಲಿರುವವರು, ಪ್ರಜಾಪ್ರಭುತ್ವದಡಿಯಲ್ಲಿ ಜನರಿಂದ ಆಯ್ಕೆಯಾದ ಸಂಸದರನ್ನು ಸುಪ್ರೀಂಕೋರ್ಟ್ ಅತ್ಯಂತ ಕೀಳುಮಟ್ಟದಿಂದ ವರ್ತಿಸಿರುವುದು ಶೋಭೆಯಲ್ಲ. ಆಳುವ ಸರ್ಕಾರವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ ನಾಯಕರು ದೇಶದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಎತ್ತುವುದೇ ಪ್ರಜಾಪ್ರಭುತ್ವದ ಸೌಂದರ್ಯ. ಸಂವಿಧಾನದ ಪರವಾಗಿ ಹೋರಾಡುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುತ್ತಿರುವ ರಾಹುಲ್ ಗಾಂಧಿ ಅವರ ಹೋರಾಟಕ್ಕ ಸುಪ್ರೀಂಕೋರ್ಟ್ ಬೆನ್ನಿಗೆ ನಿಲ್ಲಬೇಕಿತ್ತು.
ಸುಪ್ರೀಂಕೋರ್ಟ್ ಸೇರಿದಂತೆ ಇತ್ತೀಚಿಗೆ ಕೆಲವು ಹೈಕೋರ್ಟ್ ಗಳು ರಾಜಕೀಯ ಪ್ರೇರಿತ ನಿರ್ದೇಶನ ಹಾಗೂ ನೀಡುತ್ತಿರುವ ತೀರ್ಪುಗಳ ವಿರುದ್ಧ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸಂವಿಧಾನ ಹಾಗೂ ನ್ಯಾಯಂಗ ವ್ಯವಸ್ಥೆಯ ನಂಬಿಕೆ ಉಳಿಸಲಿ ಎಂದು ಒತ್ತಾಯಿಸುತ್ತೇನೆ.
– ಬಿ ಕೆ ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯ




