ಬೆಂಗಳೂರು: ಸಮಾಜದಲ್ಲಿ ಯುವಜನ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಯುವಕ-ಯುವತಿಯರೇ ದೇಶದ ಸಂಪತ್ತು, ಅವರು ವ್ಯವಸನಿಗಳಾಗುತ್ತಿರುವುದು ದುರದೃಷ್ಟಕರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶವನ್ನು ಮಾದಕವಸ್ತು ಮುಕ್ತ ರಾಷ್ಟ್ರವಾಗಿಸಬೇಕು.ಈ ನಿಟ್ಟಿನಲ್ಲೆ ಸರ್ಕಾರದ ಪ್ರಯತ್ನ ಮಾತ್ರ ಯಶಸ್ವಿಯಾಗುವುದಿಲ್ಲ. ಸಮಾಜವೂ ಕೈಜೋಡಿಸಬೇಕು ಆಗ ಮಾತ್ರ, ಬೆಂಗಳೂರು, ಕರ್ನಾಟಕ ಹಾಗೂ ಇಡೀ ದೇಶವನ್ನು ಮಾದಕ ವ್ಯಸನ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್

- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ

- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ

- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ

- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ

ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚಾಗುತ್ತಿದೆ. ಅದು ಕಡಿಮೆಯಾಗಬೇಕು ಎಂದರೆ ಜನರಲ್ಲಿ ಜಾಗೃತಿ ಅಗತ್ಯ. ಪೊಲೀಸರು ಎಷ್ಟೇ ಕಷ್ಟ ಪಟ್ಟರೂ, ತಡೆಗೆ ಪ್ರಯತ್ನ ಪಟ್ಟರು, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದರೂ ಸೈಬರ್ ಕ್ರೈಮ್ ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಅಗತ್ಯ. ಅಪರಾಧ ಮಾಡಬಾರದು, ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಜನರಲ್ಲಿ ಅರಿವು ಮೂಡಬೇಕು ಎಂದು ಕರೆನೀಡಿದರು.
ಎಲ್ಲರೂ ಆರೋಗ್ಯವಂತರಾಗಿ, ಸಮಾಜದ ಆಸ್ತಿಯಾಗಿ ಬಾಳಬೇಕು. ಎಲ್ಲ ಅಪರಾಧಗಳ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು.




