ಉಡುಪಿ: ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಆತುರಾತುರವಾಗಿ ಸಿಎಎ ಮಸೂದೆಯನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪೌರತ್ವ ಕಾಯ್ದೆ ಕುರಿತಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿಲುವು ಅಪಾಯಕಾರಿಯಾಗಿದೆ. ರಾಜಕೀಯ ಕಾರಣಕ್ಕಾಗಿ ಇಂಥದೊಂದು ತೀರ್ಮಾನ ಕೈಗೊಳ್ಳುವ ಮೂಲಕ ತಪ್ಪು ದಾರಿಯಲ್ಲಿ ನಡೆಯುತ್ತಿದೆ ಎಂದರು.
ಇನ್ನು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಎ ಬಗ್ಗೆ ಈವರೆಗೂ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.
ಲೋಕಸಭೆ ಚುನಾವಣೆ ಸನಿಹದಲ್ಲಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ(ಸಿಎಎ) ಕಾಯಿದೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸುವುದು ಅನುಮಾನವಾಗಿದೆ. ಪಶ್ಚಿಮ ಬಂಗಾಳ ತಮಿಳುನಾಡು ಕೇರಳ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಘೋಷಿಸಿವೆ. ಕರ್ನಾಟಕ ಸರ್ಕಾರ ಕೂಡ ಅದೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.




