ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಬದಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಬಲಿಯಾದವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಅವರು, ಈಗಾಗಲೇ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ಮಾತನಾಡಿ ಪರಿಹಾರ ಕಾರ್ಯ, ಮೃತರ ಕುಟುಂಬಗಳಿಗೆ ನೆರವು ಇತ್ಯಾದಿ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹಲವೆಡೆ ಭೂಕುಸಿತವಾಗುವ ಆತಂಕವಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು ಶಿರೂರು ಬಳಿ ಹೆದ್ದಾರಿಯಲ್ಲಿ ಭೂಕುಸಿತಕ್ಕೆ ಸಿಲುಕಿ ಇಬ್ಬರು ಮಕ್ಕಳು ಸೇರಿ ಹಲವರು ಸಾವನ್ನಪ್ಪಿರುವ ದಾರುಣ ಘಟನೆ ನನಗೆ ತೀವ್ರ ಆಘಾತ ಉಂಟುಮಾಡಿದೆ. ಮೃತರೆಲ್ಲರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿ ಬದಿ ಸಣ್ಣಪುಟ್ಟ ಗೂಡಂಗಡಿ, ಹೋಟೆಲ್ ಇಟ್ಟುಕೊಂಡು ಬದುಕು ಕಟ್ಟಿಕೊಂಡಿರುವ ಜನತೆಯಲ್ಲಿ ಕಳಕಳಿಯ ಮನವಿ ಮಾಡಿರುವ ಅವರು, ಮಳೆಗಾಲ, ಇನ್ನಿತರೆ ಅಪಾಯಕಾರಿ ಸಂದರ್ಭಗಳಲ್ಲಿ ಭೂ ಕುಸಿತದ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು. ರಸ್ತೆಬದಿ ಗುಡ್ಡಗಳ ಕೆಳಗೆ ವಾಸಿಸುವ, ಸಣ್ಣಪುಟ್ಟ ವ್ಯಾಪಾರ ಮಾಡಿಕೊಳ್ಳುವವರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.




