ಬೆಂಗಳೂರು: ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ಕ್ಷಮೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಯಾಚಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು ಹೈಕೋರ್ಟ್ ನಲ್ಲಿ ಇದ್ದಾಗ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ವಿರುದ್ಧದ ಪ್ರಕರಣ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿ ನೀಡಿದ ತೀರ್ಪು ಗಳು ದೇಶದ ಗಮನ ಸೆಳೆದಿವೆ.
ನ್ಯಾಯಮೂರ್ತಿಯಾಗಿ ಇವರ ಕಾರ್ಯ ವೈಖರಿ ಮತ್ತು ತೀರ್ಮಾನಗಳು ನ್ಯಾಯದಾನ ವ್ಯವಸ್ಥೆಯಲ್ಲಿ ಚಾರಿತ್ರಿಕ ಎಂದು ವಿಶ್ಲೇಷಿಸಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ಕಾಣಿಸಿಕೊಂಡ ಮಾರಣಾಂತಿಕ ಕೋವಿಡ್ ಸಾಂಕ್ರಾಮಿಕ ನಿಯಂತ್ರಿಸಲು ಮಾಡಲಾದ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪಗಳು ಮತ್ತು ಕೆಲವು ವರದಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿತ್ತು.
ಆಯೋಗ ಮಧ್ಯಂತರ ವರದಿ ನೀಡಿದೆ. ಇದರಲ್ಲಿ ಅಂದು ನಡೆದ ಖರೀದಿ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿದೆ ಎಂದು ತಿಳಿಸಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರ ನಿರ್ದೇಶನದ ಮೇರೆಗೆ ಈ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ತಿಳಿಸಿದ್ದು ರಾಜ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ.
ಈ ವರದಿ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದ ಪ್ರಹ್ಲಾದ ಜೋಶಿ, ನ್ಯಾಯಮೂರ್ತಿ ಕುನ್ಹಾ ಅವರ ಬಗ್ಗೆ ಮಾಡಿದ ಟೀಕೆ ಸಾಕಷ್ಟು ವಿವಾದವನ್ನು ಸೃಷ್ಟಿಸಿತ್ತು. ನ್ಯಾಯಮೂರ್ತಿಯೊಬ್ಬರ ಬಗ್ಗೆ ಕೇಂದ್ರ ಮಂತ್ರಿ ಮಾಡಿದ ಟೀಕೆ ಅನುಚಿತವಾದ ಕ್ರಮ ಎಂಬ ಆಕ್ರೋಶ ವ್ಯಕ್ತವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಕಾನೂನು ಸಮರಕ್ಕೆ ಮುಂದಾಗಿತ್ತು.
ಇದರ ಬೆನ್ನಲ್ಲೇ ತಾವು ಮಾಡುವ ಟೀಕೆ ತಪ್ಪು ಎಂದು ಅರ್ಥೈಸಿಕೊಂಡಿರುವ ಪ್ರಹ್ಲಾದ್ ಜೋಶಿ ಅವರು ನ್ಯಾಯಮೂರ್ತಿ ಕುನ್ಹಾ ಅವರಿಗೆ ಪತ್ರ ಬರೆದಿದ್ದು, ತಾವು ಮಾಡಿದ ಟೀಕೆಗಾಗಿ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸಿದ್ದಾರೆ.




