ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅಣ್ಣ ಗೋಪಾಲ ಜೋಷಿ ಹಾಗೂ ಅಣ್ಣನ ಪುತ್ರ ಅಜಯ್ ಜೋಷಿಯನ್ನು ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಈ ಇಬ್ಬರನ್ನು ಬಂಧಿಸಲಾಗಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಗೋಪಾಲ ಜೋಷಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಷಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರಿಂದ 2 ರೂಪಾಯಿ ಕೋಟಿ ಸುಲಿಗೆ ಮಾಡಿದ್ದ ಆರೋಪದಡಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಎಫ್ಐಆರ್ ದಾಖಲಾಗುತ್ತಿದ್ದಂತೆ ಗೋಪಾಲ ಜೋಷಿ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧರಿಸಿ ಹುಡುಕಾಟ ನಡೆಸಿದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿದ್ದಾದ್ದಾರೆ.
ದೇವಾನಂದ ಚೌಹಾಣ್ ಪತ್ನಿ ಸುನಿತಾ ಚವ್ಹಾಣ್ ಅವರು ಬೆಂಗಳೂರಿನ ಬಸವೇಶ್ವರನಗರ ಪೊಲೀಸರಿಗೆ ಇವರ ವಿರುದ್ಧ ದೂರು ನೀಡಿದ್ದರು. ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೆಸರು ಬಳಕೆಯಾಗುತ್ತಿರುವುದಕ್ಕೆ ತಕರಾರು ತೆಗೆದಿರುವ ಸುನಿತಾ, ನಾನು ದೂರು ಕೊಟ್ಟಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಅನವಶ್ಯಕವಾಗಿ ಪ್ರಲ್ಹಾದ್ ಜೋಷಿಯವರ ಹೆಸರನ್ನು ತರಬಾರದು ಎಂದು ಮಾಧ್ಯಮಗಳಿಗೆ ಸಲಹೆ ನೀಡಿದ್ದಾರೆ.



