ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ ತಾಂತ್ರಿಕ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ತೆರಳಿರುವ ಅವರಿಗೆ ಇದೀಗ ಕೇಂದ್ರ ವಿದೇಶಾಂಗ ಸಚಿವಾಲಯ ಕಾರಣ ಕೇಳಿ ನೋಟಿಸ್ ಜಾರಿಮಾಡಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ರಾಜ್ಯ ಸರ್ಕಾರದ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರಿಗೆ ಹಲವು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಅವರ ರಾಜತಂತ್ರಿಕ ಪಾಸ್ ಪೋರ್ಟ್ ರದ್ದು ಪಡಿಸುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಗೆ ಪತ್ರ ಬರೆದಿದೆ. ಇದಕ್ಕೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದರು.
ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ವ್ಯವಹಾರಗಳ ಇಲಾಖೆ ಇದೀಗ ಪ್ರಜ್ವಲ್ ರೇವಣ್ಣ ಅವರಿಗೆ ಶೋಕಾಸ್ ಜಾರಿಗೊಳಿಸಿದೆ. ಇದರಲ್ಲಿ ಅವರ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪವನ್ನು ಪ್ರಸ್ತಾಪಿಸಿದ್ದು ತಕ್ಷಣವೇ ಇದಕ್ಕೆ ಉತ್ತರ ನೀಡಬೇಕು ಎಂದು ಸೂಚನೆ ನೀಡಿದೆ.
ಆದಷ್ಟು ಶೀಘ್ರ ನೀವು ಶೋಕಾಸ್ ನೋಟಿಸ್‌ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶೋಕಾಸ್ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಲಾಗಿದೆ. ನೀವು ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ್ಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ.
ಒಂದು ವೇಳೆ ಶೋಕಾಸ್ ನೋಟಿಸ್‌ಗೂ ಉತ್ತರ ನೀಡದಿದ್ದರೆ ಅವರಿಗೆ ಇನ್ನಷ್ಟು ಕಾನೂನಿನ ಕುಣಿಕೆ ಬಿಗಿಯಾಗಲಿದೆ. ವಿದೇಶಾಂಗ ವ್ಯವಹಾರಗಳ ಇಲಾಖೆ ಅನಿವಾರ್ಯವಾಗಿ ಪಾಸ್‌ಪೋರ್ಟ್ ರದ್ದುಪಡಿಸಲಿದೆ. ಆಗ ಅವರು ವಿಧಿ ಇಲ್ಲದೆ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಪಡಬೇಕು.




