ಕಾರವಾರ: ಕಾರವಾರ ನಗರದ ಹೊರವಲಯದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆಯ ಪ್ರದೇಶದ ಬಳಿ ಕಳೆದ ರಾತ್ರಿ ಅಪರಿಚಿತ ಡ್ರೋನ್ ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಪರಿಚಿತ ಡ್ರೋನ್ ಹಾರಾಟ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ವಕ್ಕನಳ್ಳಿಯ ಐಎನ್ಎಸ್ ಪತಂಜಲಿ ಆಸ್ಪತ್ರೆಯ ಹಿಂಬದಿಯಿಂದ ಬಿಣಗಾ ಚತುಷ್ಪಥ ಹೆದ್ದಾರಿಯ ಸುರಂಗ ಮಾರ್ಗದವರೆಗೂ ಡ್ರೋನ್ ಹಾರಾಡಿದೆ.
ಸುರಕ್ಷತೆ ದೃಷ್ಟಿಯಿಂದ ನೌಕಾ ನೆಲೆ ಪ್ರದೇಶದಲ್ಲಿ ಡ್ರೋನ್ ಹಾಗೂ ಕ್ಯಾಮರಾ ಬಳಕೆ ನಿಷೇಧವಿದೆ. ಇದರ ಹೊರತಾಗಿಯೂ ಡ್ರೋನ್ ಹಾರಾಡಿದೆ. ಡ್ರೋನ್ ಹಾರಾಟದ ವಿಡಿಯೋವನ್ನು ಸ್ಥಳಿಯರು ನೌಕಾನೆಲೆ ಅಧಿಕಾರಿಗಳಿಗೆ ನೀಡಿ, ಗಮನಕ್ಕೆ ತಂದಿದ್ದಾರೆ.
ಸುಮಾರು 2-3 ಕಿ.ಮೀ ಎತ್ತರದಲ್ಲಿ ನೈಟ್ ವಿಶನ್ ಡ್ರೋನ್ ಹಾರಾಡಿದ್ದು, ಹಲವು ಸಂಶಯಕ್ಕೆ ಕಾರಣಾಗಿದೆ. ಸಾಮಾನ್ಯವಾಗಿ 600 ದಿಂದ 1,200 ಮೀ ಎತ್ತರ ಹಾರುವ ಡ್ರೋನ್ ಸ್ಥಳೀಯವಾಗಿ ಬಳಕೆ ಮಾಡಲಾಗುತ್ತದೆ. ಆದರೆ, ಈ ಡ್ರೋನ್ ಸುಮಾರು 3 ಕಿ.ಮೀ.ಗೂ ಹೆಚ್ಚು ದೂರ ಹಾರಾಡಿರುವುದು ಸಂಶಯಕ್ಕೆ ಕಾರಣವಾಗಿದೆ.
ಈ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನೌಕಾಪಡೆ, ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಗಳು ಮುಂದಾಗಿವೆ. ಗುಪ್ತಚರ ಇಲಾಖೆ ಅಧಿಕಾರಿಗಳು ಸ್ಥಳೀಯರಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.
ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್ಬಿ ಹಾಗೂ ಎನ್ಹೆಚ್ಎಐಗಳು ಕೂಡ ಡ್ರೋನ್ ಬಳಸಿಲ್ಲ ಎಂದು ಸ್ಪಷ್ಟಪಡಿಸಿವೆ. ಇದರಿಂದ ಸಂಶಯ ದಟ್ಟವಾಗಿದ್ದು ನೌಕಾಪಡೆ ಹಾಗೂ ಗುಪ್ತಚರ ಇಲಾಖೆಗಳಿಂದ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.
ಇತ್ತೀಚೆಗೆ ಹನಿಟ್ರ್ಯಾಪ್‌ಗೆ ಒಳಗಾಗಿ ನೌಕಾನೆಲೆಯಲ್ಲಿನ ಗುಪ್ತ ಮಾಹಿತಿ ನೀಡುತ್ತಿದ್ದ ಮೂವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಡ್ರೋನ್ ಹಾರಾಟ ಗುಪ್ತಚರ ಇಲಾಖೆ ತಲೆ ಕೆಡಿಸಿಕೊಳ್ಳುವಂತಾಗಿದೆ.




