ಉತ್ತರಪ್ರದೇಶ ವಿಧಾನಸಭೆ ಚುನಾವಣೆ 2024ರ ಲೋಕಸಭೆ ಚುನಾವಣೆಯ ದಿಕ್ಸೂಚಿಯಲ್ಲ: ಪ್ರಶಾಂತ್ ಕಿಶೋರ್
ದೆಹಲಿ: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ ಫಲಿತಾಂಶ 2024ರ ಲೋಕಸಭೆ ಚುನಾವಣೆಯ ದಿಕ್ಸೂಚಿಯಲ್ಲ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತಾಡಿರುವ ಅವರು, ಯಾರು ಎಷ್ಟೇ ಪ್ರಮಾಣದಲ್ಲಿ ಧ್ರುವೀಕರಣಕ್ಕೆ ಯತ್ನಿಸಿದರು ಅದಕ್ಕೂ ಒಂದು ಮಿತಿ ಇದೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡಿನ ಡಿಎಂಕೆಯ ಎಂ.ಕೆ.ಸ್ಟಾಲಿನ್ ಮತ್ತು ಪಶ್ಚಿಮ ಬಂಗಾಳದ ಟಿಎಂಸಿಯ ಮಮತಾ ಬ್ಯಾನರ್ಜಿಯವರ ಗೆಲುವಿನಲ್ಲಿ ಪಾತ್ರ ವಹಿಸಿದ್ದ ಮತ್ತು ಇದಕ್ಕೂ ಮುನ್ನ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ಇವರು ಕಾಂಗ್ರೆಸ್ ಬಾಗಿಲನ್ನು ಕೂಡ ತಟ್ಟಿದ್ದರು. ಆದರೆ, ಕೆಲವು ದಿನಗಳಿಂದ ಕಾಂಗ್ರೆಸ್ ವಿರುದ್ಧ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
ಉತ್ತರಪ್ರದೇಶದಲ್ಲಿ 2022ರ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಪ್ರಿಯಾಂಕ ಗಾಂಧಿ ಈ ಬಾರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ಮರಳಿ ತರಲು ಯತ್ನಿಸುತ್ತಿದ್ದರೆ, ಬಿ ಎಸ್ ಪಿಯ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕೂಡ ಇನ್ನಿಲದಂತೆ ಯತ್ನಿಸುತ್ತಿದ್ದಾರೆ. ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಕೂಡ ಅಧಿಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಾಂತ್ ಕಿಶೋರ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.




