ಬೆಂಗಳೂರು: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಸಿಎಂ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಅಂಗನವಾಡಿಗಳ ಸಮಸ್ಯೆಗಳ ಕುರಿತು ಸಿದ್ದರಾಮಯ್ಯ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗುವುದು ಎಂದರು.
ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದರು.
ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ಒಂಭತ್ತು ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು. ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದರು.
ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಹಾಜರಿದ್ದರು.




