ಬೆಂಗಳೂರು: ಉತ್ತರ ಕರ್ನಾಟಕ ಜನರ ಬಹುದಿನದ ಬೇಡಿಕೆಯಾದ ಕೃಷ್ಣ ಮೇಲ್ದಂಡೆ ಯೋಜನೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಹಣಕಾಸು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಬದ್ಧವಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಂತರರಾಜ್ಯ ಜಲ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಸಾಧ್ಯವಿಲ್ಲ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣದ ತೀರ್ಪು ಅಧಿಸೂಚನೆ ಜಾರಿಯಾಗಬೇಕು. ಆಲಮಟ್ಟಿ ಅಣೆಕಟ್ಟೆಯನ್ನು 519.06 ಅಡಿಯಿಂದ 524.25 ಅಡಿ ಎತ್ತರಿಸಲು 1 ಲಕ್ಷ ಭೂಮಿ ಮುಳುಗಡೆಯಾಗಲಿದೆ. ಅಷ್ಟು ಜಮೀನಿಗೂ ಪರಿಹಾರ ನೀಡಬೇಕು. ಭಾರಿ ಪ್ರಮಾಣದ ಹಣ ಬೇಕಿದೆ. ಈವರೆಗೂ 30 ಸಾವಿರ ಎಕರೆ ಸ್ವಾಧೀನ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದರು.
ನ್ಯಾಯಾಲಯದ ತೀರ್ಪು ಅಧಿಸೂಚನೆಯಾದ ಬಳಿಕ ಹಣಕಾಸು ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಎಲ್ಲಾ ಅರ್ಹತೆಗಳೂ ಇವೆ. ಆದರೆ ಅಂತರರಾಜ್ಯ ನದಿ ವಿವಾದ ಇರುವುದರಿಂದಾಗಿ ಅದನ್ನು ಅಧಿಸೂಚನೆ ಹೊರಡಿಸಿ ಇತ್ಯರ್ಥಪಡಿಸಲು ಸಾಧ್ಯವಿದೆ ಎಂದರು.




