ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಕಳಪೆ, ಅವಧಿಮೀರಿದ ಪದಾರ್ಥ ಬಳಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಮೇಶ್ವರಂ ಕೆಫೆ ಸೇರಿ ಹಲವು ಹೋಟೆಲ್ ಗಳ ತಪಾಸಣೆ ನಡೆಸಲಾಗಿದೆ. ಫುಡ್ ಸೇಫ್ಟಿ ಆಕ್ಟ್ ಅಡಿ ತಪಾಸಣೆಗೆ ಸೂಚನೆ ನೀಡಲಾಗಿದ್ದು, ಬಿಬಿಎಂಪಿ ಮತ್ತು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಸಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆಯಿಂದ ನೋಟಿಸ್ ನೀಡಲಾಗಿದ್ದು, ತೆಲಂಗಾಣದ ರಾಮೇಶ್ವರಂ ಕೆಫೆ ಮೇಲೆ ರೇಡ್ ನಡೆದಿತ್ತು.ಈ ವೇಳೆ ಅಪಾರ ಪ್ರಮಾಣದ ಔಟ್ ಡೇಟೆಡ್ ಐಟಂ ಗಳು ಪತ್ತೆಯಾಗಿದ್ದವು.
ಈ ಹಿನ್ನೆಲೆಯಲ್ಲಿ ತೆಲಂಗಾಣ ಆರೋಗ್ಯ ಇಲಾಖೆ ರಾಮೇಶ್ವರಂ ಕೆಫೆ ವಿರುದ್ಧ ಪ್ರಕರಣ ದಾಖಲಿಸಿ ಸಾರ್ವಜನಿಕ ಪ್ರಕಟಣೆ ಹೊರಡಿಸಿತ್ತು. ಇದೀಗ ಕರ್ನಾಟಕ ಸರ್ಕಾರದಿಂದಲೂ ಕ್ರಮ ಕೈಗೊಳ್ಳಲಾಗಿದೆ.
ಈ ಕುರಿತು ಸಿಎಂ ವಿಶೇಷಾಧಿಕಾರಿ ಕೆ.ವೈಷ್ಣವಿಯವರು ಆರೋಗ್ಯ ಇಲಾಖೆಗೆ ಪತ್ರ ಬರೆದಿದ್ದು, ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳನ್ನು ಉಪಯೋಗಿಸುತ್ತಿರುವಂತ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದಾರೆ.
ಸಾರ್ವಜನಿಕರ ಆರೋಗ್ಯ ಹಿನ್ನೆಲೆಯಲ್ಲಿ ಸಿಎಂ ಕಚೇರಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ರಾಮೇಶ್ವರಂ ಕೆಫೆ ಮೇಲಿನ ರೇಡ್ ಬಗ್ಗೆ ವರದಿ ಮಾಡಿದ್ದಕ್ಕೆ ಬೆದರಿಕೆ ಧಾಟಿಯಲ್ಲಿ ವಿಡಿಯೋ ಮಾಡಿ ಬಿಟ್ಟಿದ್ದ ಕೆಫೆ ಮಾಲೀಕ ರಾಘವೇಂದ್ರ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.




