ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ಎಸ್ಐಆರ್ ಅನ್ನು ರಾಜಕೀಯ ಉದ್ದೇಶಕ್ಕೆ ಬಳಸುತ್ತಿರುವುದು ಸರಿಯಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣಾ ಆಯೋಗದ ವಿಚಾರವಾಗಿ ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದಾ ಪ್ರಶ್ನೆಗೆ, ಅರ್ಹರೆಲ್ಲರಿಗೂ ಮತದಾನದ ಹಕ್ಕು ಸಿಗಬೇಕು. ಇದು ಪ್ರಜಾಪ್ರಭುತ್ವದ ರಾಷ್ಟ್ರ, ಸರ್ವಾಧಿಕಾರವಲ್ಲ. ಚುನಾವಣಾ ಆಯೋಗದ ಮೂವರು ಸದಸ್ಯರ ಸಮಿತಿಯಲ್ಲೇ ಬಹುಮತದ ನಿರ್ಧಾರವಾಗುತ್ತಿಲ್ಲ ಎಂಬುದು ಬಹಿರಂಗವಾಗಿದೆ. ಈ ವಿಚಾರದಲ್ಲಿ ಯಾರಿಗೂ ತೃಪ್ತಿ ಇಲ್ಲ ಎಂದರು.
ರಾಹುಲ್ ಗಾಂಧಿ ಎಸ್ಐಆರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಹೊಣೆಗಾರರು ಎಂದು ನಾವೂ ಹೇಳಿದ್ದೇವೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸುತ್ತಿರುವುದು ಸಹಜ ಎಂದರು.
ಬೇರೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮುಂಗಡ ಹಣ ಕೊಟ್ಟಿಲ್ಲವೇ?: ಕೇಂದ್ರದಿಂದ ಮುಂಗಡ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಡಿದ್ದ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘‘ನಾವು ಕತ್ತೆಯನ್ನೇ ಕಾಯುತ್ತಿದ್ದೇವೆ. ಅವರು ಏನಾದರೂ ಅಂದುಕೊಳ್ಳಲಿ. ಅವರ ಜವಾಬ್ದಾರಿ ಏನು ಎಂಬುದನ್ನು ಅವರು ತಿಳಿದುಕೊಳ್ಳಲಿ’’ ಎಂದರು.
ಬೇರೆ ರಾಜ್ಯಗಳಿಗೆ ಮುಂಗಡ ಹಣ ಕೊಟ್ಟಿಲ್ಲವೇ? ತಂಡ ಕಳುಹಿಸಿ ಮನವಿ ಮಾಡಲಿ. ಪ್ರಧಾನಮಂತ್ರಿಯವರ ಭೇಟಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಾವು ಸಮಯ ಕೇಳಿದ್ದೇವೆ. ಸಮಯ ಸಿಕ್ಕಾಗ ಜೋಶಿ ಅವರೂ ಬರಲಿ, ಎಲ್ಲರೂ ಬರಲಿ ಎಂದರು.




