ಡಿಸೆಂಬರ್ 6ರ ನಂತರ ನಿರ್ಧಾರ ಪ್ರಕಟಿಸುವುದಾಗಿ ವಿ.ಸೋಮಣ್ಣ ಹೇಳಿಕೆ

2 years ago

#VSomanna #statement #decision #bjp

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಕುರಿತು ಅಸಮಾಧಾನ ಹೊಂದಿರುವ ಮಾಜಿ ಸಚಿವ ವಿ.ಸೋಮಣ್ಣ ಡಿಸೆಂಬರ್ 6ರ ನಂತರ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆ ನಡೆಯುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಮಾಹಿತಿ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ಹಾಗೂ ಅವರ ಕುಟುಂಬದವರು ನಿರ್ಮಿಸಿರುವ ಗುರುಭವನ ಉದ್ಘಾಟನೆಗೆ ಆಹ್ವಾನಿಸಿದ್ದಾರೆ. ಹಾಗಾಗಿ ಡಿ. 6ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, ಬಿಜೆಪಿ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆಯಂತಾಗಿದೆ. ರಾಜಕಾರಣ ಒಂದು ಮನೆತನಕ್ಕೆ ಸೀಮಿತವಲ್ಲ, ಅದು ನಾಟಕವೂ ಅಲ್ಲ. ಒಳ ಒಪ್ಪಂದಕ್ಕೆ ರಾಜಕಾರಣ ಸೀಮಿತವಾಗಬಾರದು ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಜೊತೆಗೆ, ಕಾಂಗ್ರೆಸ್ ಸೇರುವಂತೆ ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ ಎಂದು  ಸ್ಪಷ್ಟಪಡಿಸಿದ್ದಾರೆ.

ಡಿಸೆಂಬರ್ ಆರರಂದು ತುಮಕೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇನೆ. ಅಂದು ನನ್ನ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೇಳುತ್ತೇನೆ ಎಂದು ಹೇಳಿದರು.

Leave a Reply