ಬೆಂಗಳೂರು: ರಾಜ್ಯದ ಅನೇಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಎಸ್‌ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಎಂ ಸಿ ಸುಧಾಕರ್, ವಿವಿಧ ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಹಿಂದಿನಿಂದಲೂ ಖಾಲಿ ಇವೆ. 2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ ಎಂದರು.
ಜಾನಪದ ವಿಶ್ವವಿದ್ಯಾಲಯದಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆದಿದೆ. ಸಚಿವ ಸಂಪುಟದ ಉಪಸಮಿತಿಯನ್ನೂ ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಟಿ ಮಾಡಲಾಗಿದೆ. ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ ಎಂದರು.



