ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿಕೊಂಡಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಯೂನಿಯನ್ ಬ್ಯಾಂಕ್ ನ ಎಂ.ಜಿ.ರಸ್ತೆ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹೇಶ್ ಜೆ. ಅವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲು ಮುಂದಾಗಿದೆ.
ಯೂನಿಯನ್ ಬ್ಯಾಂಕ್ ಶಾಖೆಯ ಹಿಂದಿನ ಮುಖ್ಯಸ್ಥ ಸುಚಿಸ್ಮಿತಾ ರೌಲ್, ದೀಪಾ ಡಿ., ಹಿಂದಿನ ಕ್ರೆಡಿಟ್ ಆಫೀಸರ್ ಕೆ.ವಿ. ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳು ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್ ಡೆತ್ನೋಟ್ ಬರೆದಿಟ್ಟು ಕಳೆದ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿ ನೀಡಿದ ದೂರಿನ ಅನ್ವಯ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲ್ಲದೇ, ನಿಗಮದಲ್ಲಿ ಅನುದಾನದ ಹಣ ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.
ಆರೋಪಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ನಿಗಮದಲ್ಲಿ ಅನುದಾನದ ಹಣ ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ.
ಪ್ರಕರಣದ ಸಮಗ್ರ ತನಿಖೆಗಾಗಿ ಕಳೆದ ಮೇ 31ರಂದು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ, ಅಕ್ರಮ ಕುರಿತು ತನಿಖೆ ನಡೆಸುವಂತೆ ಯೂನಿಯನ್ ಬ್ಯಾಂಕ್ನ ಎಂ.ಜಿ. ರಸ್ತೆ ಶಾಖೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಿಬಿಐಗೆ ದೂರು ನೀಡಿದ್ದರು.




