ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 89.62 ಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನೆಕ್ಕಂಟಿ ನಾಗರಾಜ್ ಮಾತ್ರವಲ್ಲದೆ ಅವರ ಸಂಬಂಧಿಕರಿಗೂ ಇದೀಗ ಸಂಕಷ್ಟ ಎದುರಾಗಿದೆ.
- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪೋಸ್ಟ್ ಕುರಿತು ಯೋಗೇಶ್ ಮಾಸ್ಟರ್ ಸ್ಪಷ್ಟೀಕರಣ
- ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ: ಕೃಷ್ಣ ಬೈರೇಗೌಡ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
ನೆಕ್ಕಂಟಿ ನಾಗರಾಜ್ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳ ವ್ಯವಹಾರಗಳನ್ನು ಕಲೆ ಹಾಕಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇದೀಗ ಅವರಿಗೆಲ್ಲಾ ನೋಟಿಸ್ ನೀಡಿದ್ದಾರೆ.
ಮೂರು ದಿನಗಳ ಹಿಂದೆ ಬಳ್ಳಾರಿ ತಾಲೂಕಿನ ಕೃಷ್ಣಾನಗರದ ಕ್ಯಾಂಪ್ ಗೆ ಬಂದಿದ್ದ ಇಡಿ ಅಧಿಕಾರಿಗಳು, ನೆಕ್ಕಂಟಿ ನಾಗರಾಜ್ ಅವರ ಮಾವ ವೆಂಕಟೇಶ್ವರ ರಾವ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆನ್ನಲ್ಲೇ ಕೃಷ್ಣಾನಗರ ಕ್ಯಾಂಪ್ ನ ಕೆಲವರಿಗೆ ನೋಟಿಸ್ ನೀಡಿ ಹಣ ವಾಪಾಸ್ ನೀಡುವಂತೆ ತಾಕೀತು ಮಾಡಿದ್ದಾರೆ.
ಕೃಷ್ಣಾನಗರದ ಕ್ಯಾಂಪ್ ನಲ್ಲಿರುವ ಸಂಬಂಧಿಕರಿಗೆ ವೆಂಕಟೇಶ್ವರ ರಾವ್ ಹಣ ವರ್ಗಾವಣೆ ಮಾಡಿಸಿದ್ದರು. ಎನ್ನಲಾಗಿದೆ. ಇದರಲ್ಲಿ ಶ್ರೀನಿವಾಸ ಎನ್ನುವವರು ಎಸ್ಐಟಿ ವಿಚಾರಣೆಗೆ ಹೋಗಿದ್ದು, ಹಣ ವಾಪಸ್ ನೀಡುವುದಾಗಿ ಹೇಳಿದ್ದರು. ಇದೀಗ ನಿನ್ನೆ ಮತ್ತೊಮ್ಮೆ ಇಡಿ ಅಧಿಕಾರಿಗಳು ಕೃಷ್ಣಾನಗರದ ಕ್ಯಾಂಪ್ ಗೆ ಭೇಟಿ ನೀಡಿ ನೋಟಿಸ್ ನೀಡಿದ್ದಾರೆ. ಹಣ ಹಿಂದಿರುಗಿಸದ ಬಗ್ಗೆ ಕಾರಣ ನೀಡುವಂತೆ ಇಡಿ ಮತ್ತೆ ನೋಟಿಸ್ ನೀಡಿದೆ.
ವಾಲ್ಮೀಕಿ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‌ಐಟಿ, ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ ಸೇರಿ 12 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿದೆ.




