ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ದೇಶದ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳಾಗಿದೆ. ಚುನಾವಣಾ ಆಯೋಗ – ಸಿಬಿಐ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
- ತಮ್ಮ ಮಕ್ಕಳ ಭವಿಷ್ಯದ ಮೇಲೆ ಇರುವ ಬಿಜೆಪಿಯವರ ಕಾಳಜಿ ಬಡವರ ಮಕ್ಕಳ ಮೇಲೇಕಿಲ್ಲ?: ಪ್ರಿಯಾಂಕ್ ಖರ್ಗೆ
- ಅಂಬೇಡ್ಕರ್ ಸಮಾನತೆ, ನ್ಯಾಯ, ಮಾನವ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ: ಪಾಟೀಲ್
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮತಗಳ್ಳತನ ಕುರಿತು ಮಾತನಾಡಿದ ಅವರು, ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.
ಬಿಜೆಪಿ ಮತಗಳ್ಳತನದ ಮೂಲಕ ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ ಮತ್ತು ಲೋಕಸಭೆಯಲ್ಲಿ ಕೂಡ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದರು.
ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ನಡೆದ ಮತಗಳ್ಳತನವನ್ನು ದಾಖಲೆ ಸಮೇತ ಬಯಲಿಗೆ ಎಳೆದು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದರು.
ಚುನಾವಣಾ ಆಯೋಗಕ್ಕೆ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನವು ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.
ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಿದ್ದೇವೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.




