ಬಳ್ಳಾರಿ: ಪ್ರಪಂಚದಲ್ಲಿಯೇ ಹಾಲು ಉತ್ಪಾದನೆಯಲ್ಲಿ ಭಾರತ ದೇಶ 2ನೇ ಸ್ಥಾನದಲ್ಲಿರಲು ಡಾ.ವರ್ಗೀಸ್ ಕುರಿಯನ್ ಅವರೇ ಕಾರಣವಾಗಿದ್ದು, ಹಾಗಾಗಿ ಅವರನ್ನು ಕ್ಷೀರ ಕ್ರಾಂತಿಯ ಪಿತಾಮಹ ಎಂದು ಕರೆಯುತ್ತಾರೆ. ಹಾಲು ಉತ್ಪಾದನೆಯಲ್ಲಿ ಡಾ.ವರ್ಗೀಸ್ ಕುರಿಯನ್ ಅವರ ಸೇವೆ ಅಪಾರವಾಗಿದೆ ಎಂದು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ (ಮಾರುಕಟ್ಟೆ) ಕೆ.ಎಸ್.ಎರ್ರಿ ಸ್ವಾಮಿರೆಡ್ಡಿ ಹೇಳಿದರು.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಾಂತಿದಾಮ ಆವರಣದ ಬಾಲಕಿಯರ ಬಾಲಮಂದಿರದಲ್ಲಿ ಮಂಗಳವಾರ ಕ್ಷೀರಕ್ರಾಂತಿಯ ಪಿತಾಮಹ ಪದ್ಮಭೂಷಣ ಡಾ.ವರ್ಗೀಸ್ ಕುರಿಯನ್ ಅವರ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಮೂಲ್ ಡೇರಿಯ ಸ್ಥಾಪಕರು ಮತ್ತು ಭಾರತದಲ್ಲಿ ಅಪರೇಷನ್ ಫ್ಲಡ್ (ಕ್ಷೀರ ಕ್ರಾಂತಿ) ಎಂಬ ಜಗತ್ತಿನ ಅತಿ ದೊಡ್ಡ ಡೇರಿ ಯೋಜನೆಯನ್ನು ಪ್ರಾರಂಭಿಸಿ ವಿಶ್ವದ ಅತಿ ದೊಡ್ಡ ಹಾಲು ಉತ್ಪಾದಕರ ದೇಶವನ್ನಾಗಿ ಮಾಡಲು ಕಾರಣೀಕೃತರಾದ ಡಾ.ವರ್ಗೀಸ್ ಕುರಿಯನ್ ಅವರ ಜನ್ಮ ದಿನವಾದ ನ.26 ರಂದು “ರಾಷ್ಟ್ರೀಯ ಹಾಲು ದಿನಾಚರಣೆ” ಆಚರಿಸಲಾಗುತ್ತಿದೆ ಎಂದರು.
ರಾಬಕೊವಿ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಟಿ.ಮಲ್ಲಿಕಾರ್ಜುನ ಮಾತನಾಡಿ, ದೈನಂದಿನ ಜೀವನದಲ್ಲಿ ಬಹಳಷ್ಟು ಕಲಬೆರಕೆ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ದೂರವಿರಲು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಉಪಯೋಗಿಸಿ ಆರೋಗ್ಯವಾಗಿರಬಹುದು ಎಂದರು.
ಕಾರ್ಯಕ್ರಮದಲ್ಲಿ ಪದ್ಮಭೂಷಣ, ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ.ವರ್ಗೀಸ್ ಕುರಿಯನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಹಾಲು ಮತ್ತು ಹಾಲಿನ ಉತ್ಪನ್ನಗಳ ಮಹತ್ವ, ಸಮತೋಲನ ಆಹಾರದಲ್ಲಿರುವ ಪೋಷಕಾಂಶಗಳು ಹಾಗೂ ಆರೋಗ್ಯಕ್ಕೆ ಅವುಗಳ ಮಹತ್ವ ಕುರಿತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ರಾಬಕೊವಿ ಹಾಲು ಒಕ್ಕೂಟದ ಮಾರುಕಟ್ಟೆ ಗುತ್ತಿಗೆ ಸಮಾಲೋಚಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ನಾಗವೇಣಿ, ಪಾರ್ವತಿ, ಒಕ್ಕೂಟದ ಸಿಬ್ಬಂದಿ ವೆಂಕಟರತ್ನ ಬಾಬು, ಬಿ.ಜಗದೀಶ್, ಪೊಬ್ಬತ್ತಿ ಗೋವಿಂದರಾಜುಲು, ಮಲ್ಲಿಕಾರ್ಜುನ, ವೀರೇಶ ಹಳೇಕೋಟೆ, ಕೆಮಿಸ್ಟ್ ಸರೋಜ, ಲೋಹಿತ್ ಕುಮಾರ್, ಸಿ.ಎನ್.ಮಂಜುನಾಥ, ಬಾಬು.ಬಿ ಸೇರಿದಂತೆ ಇತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಂದಿನಿ ಬಾದಾಮಿ ಹಾಲನ್ನು ವಿತರಿಸಲಾಯಿತು.




