ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ವಿಷಯ ಶಿಕ್ಷಕರಿಗೆ ವಾರ್ಷಿಕ ವೇತನ ಬಡ್ತಿಯನ್ನು ತಡೆಯದಂತೆ ಮೌಖಿಕವಾಗಿ ಇಲಾಖಾ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೇಲ್ಮನೆಗೆ ತಿಳಿಸಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇ. 60ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ವಿಷಯ ಶಿಕ್ಷಕರಿಗೆ ವಾರ್ಷಿಕ ವೇತನ ಬಡ್ತಿಗೆ ತಡೆ ಹಾಗೂ ನಿರಂತರ 3 ವರ್ಷಗಳಿಂದ ಕಡಿಮೆ ಫಲಿತಾಂಶ ನೀಡಿದ ವಿಷಯ ಶಿಕ್ಷಕರ ವೇತನ ಅನುದಾನ ತಡೆ ಹಿಡಿಯುವ ಕ್ರಮ ಸರಿಯಲ್ಲ. ಉತ್ತಮ ಫಲಿತಾಂಶ ಬರದಿರಲು ಶಿಕ್ಷಕರೇ ಕಾರಣರಾಗಿರುವುದಿಲ್ಲ. ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರಣಕರ್ತರಾಗಿರುತ್ತಾರೆ. ಇದನ್ನ ಸರ್ಕಾರ ಮನಗಂಡು ಕೂಡಲೇ ವೇತನ ಬಡ್ತಿ ತಡೆ ಆದೇಶ ಹಿಂಪಡೆಯಬೇಕೆಂದು ಬಿಜೆಪಿ ಸದಸ್ಯ ಎಸ್. ವ್ಹಿ. ಸಂಕನೂರು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಮಧು ಬಂಗಾರಪ್ಪ, ವೇತನ ಬಡ್ತಿ ತಡೆ ಆದೇಶವನ್ನ 2019ರಲ್ಲಿ ಬಿಜೆಪಿ ಸರ್ಕಾರ ಮಾಡಿತ್ತು. ಇದನ್ನ ನಮ್ಮ ಸರ್ಕಾರ ಮುಂದುವರೆಸಿದೆ. ಅದಾಗ್ಯೂ ಈ ಬಗ್ಗೆ ಇಲಾಖಾ ಮಟ್ಟದಲ್ಲಿ ಚರ್ಚೆ ಮಾಡಿ ವೇತನ ಬಡ್ತಿ ಹಾಗೂ ಶಿಕ್ಷಕರ ವೇತನದ ಅನುದಾನ ತಡೆ ಹಿಡಿಯದಿರಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ನಿಗದಿತ ಫಲಿತಾಂಶ ಬರದ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ವಿಷಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಕಳುಹಿಸಲಾಗಿದೆ. ಅಲ್ಲದೇ ಸುಧಾರಿತ ಫಲಿತಾಂಶ ಬರದಿರಲು ಶಿಕ್ಷಕರ ಕೊರತೆ ಪ್ರಮುಖ ಕಾರಣ ಎಂದು ಮನಗಂಡಿದ್ದೇವೆ. 2020ರವರೆಗೆ ಖಾಲಿಯಾದ ಹುದ್ದೆಗಳನ್ನ ಭರ್ತಿ ಮಾಡಲಾಗಿದೆ. ಸದ್ಯ ನಿವೃತ್ತ ನ್ಯಾ. ಹೆಚ್. ಎನ್. ನಾಗಮೋಹನ್ ದಾಸ್ ಅವರು ಒಳಮೀಸಲಾತಿ ಕಲ್ಪಿಸುವ ಸಂಬಂಧ ಕಳೆದ ವಾರವಷ್ಟೇ ಸರ್ಕಾರಕ್ಕೆ ವರದಿ ನೀಡಿದ್ದಾರೆ. ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನ ಆದ್ಯತೆ ಮೇರೆಗೆ ನೇಮಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.



